×
Ad

ಗಾಂಧಿ ಜಯಂತಿ; ಅ.2ರಂದು ಖಾದಿ ಉತ್ಪನ್ನಗಳ ಪ್ರದರ್ಶನ, ಮಾರಾಟ

Update: 2021-10-01 19:15 IST

ಉಡುಪಿ, ಅ.1: ಶನಿವಾರ ಅ.2ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಉಡುಪಿ ನಗರಸಭೆ ಆಶ್ರಯದಲ್ಲಿ ಮಹಾತ್ಮಾ ಗಾಂಧೀಜಿ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಜನರು ಖಾದಿ ಉತ್ಪನ್ನಗಳನ್ನು ಬಳಕೆ ಮಾಡಲು ವ್ಯಾಪಕ ಜನಜಾಗ್ರತಿ ಮೂಡಿಸುವ ಉದ್ದೇಶದಿಂದ ಉಡುಪಿ ಪುರಭವನದಲ್ಲಿ ಖಾದಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಲಾಗಿದೆ.

ಈ ಪ್ರದರ್ಶನ-ಮಾರಾಟ ಮೇಳವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಲಿದ್ದು, ಸಾರ್ವಜನಿಕರು ಖಾದಿ ಉತ್ಪನ್ನಗಳನ್ನು ಖರೀದಿಸಿ ಪ್ರೋತ್ಸಾಹಿಸಬೇಕೆಂದು ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News