×
Ad

ಬೆಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣ: ಮನೆ ಮಾಲಕ ಶಂಕರ್ ಸೇರಿ ಮೂವರ ಬಂಧನ

Update: 2021-10-01 20:07 IST

ಬೆಂಗಳೂರು, ಅ.1: ಮಗುವನ್ನು ಕೊಲೆಗೈದು ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಮನೆ ಮಾಲಕ ಹಲ್ಲಗೆರೆ ಶಂಕರ್ ನನ್ನು ಇಲ್ಲಿನ ಬ್ಯಾಡರಹಳ್ಳಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಶಂಕರ್ ನನ್ನ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಮೃತರು ಆತ್ಮಹತ್ಯೆಗೂ ಮುನ್ನ ಬರೆದಿರುವ ಡೆತ್‍ನೋಟ್‍ನಲ್ಲಿ ಶಂಕರ್ ವಿರುದ್ಧ ಹಲವು ಗಂಭೀರ ಆರೋಪ ಮಾಡಿದ್ದರು. ಹೀಗಾಗಿ, ಪೊಲೀಸರು ಶಂಕರ್ ನನ್ನು ವಶಕ್ಕೆ ಪಡೆದಿದ್ದಾರೆ.

ಇನ್ನು, ಬ್ಯಾಡರಹಳ್ಳಿ ಠಾಣಾ ಪೊಲೀಸರು ಶಂಕರ್ ಜೊತೆಗೆ ಅಳಿಯಂದಿರನ್ನೂ ಸಹ ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News