ಐಪಿಎಲ್: ಪಂಜಾಬ್ ಕಿಂಗ್ಸ್ ಗೆ 166 ರನ್ ಗುರಿ ನೀಡಿದ ಕೆಕೆಆರ್
Update: 2021-10-01 21:30 IST
ದುಬೈ: ಆರಂಭಿಕ ಬ್ಯಾಟ್ಸ್ ಮನ್ ವೆಂಕಟೇಶ್ ಅಯ್ಯರ್ (67, 49 ಎಸೆತ, 9 ಬೌಂಡರಿ, 1 ಸಿಕ್ಸರ್)ಅರ್ಧ ಶತಕದ ಕೊಡುಗೆಯ ನೆರವಿನಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡ ಪಂಜಾಬ್ ಕಿಂಗ್ಸ್ ತಂಡದ ಗೆಲುವಿಗೆ 166 ರನ್ ಗುರಿ ನೀಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಆಹ್ವಾನಿಸಲ್ಪಟ್ಟಿರುವ ಕೆಕೆಆರ್ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತು.
ರಾಹುಲ್ ತ್ರಿಪಾಠಿ(34), ನಿತಿಶ್ ರಾಣಾ(31)ಎರಡಂಕೆಯ ಸ್ಕೋರ್ ಗಳಿಸಿದರು. ವೆಂಕಟೇಶ್ ಅಯ್ಯರ್ ಜೊತೆಗೆ ಇನಿಂಗ್ಸ್ ಆರಂಭಿಸಿದ ಶುಭಮನ್ ಗಿಲ್ (7)ಬೇಗನೆ ವಿಕೆಟ್ ಒಪ್ಪಿಸಿದರು. ಆಗ ರಾಹುಲ್ ಜೊತೆ ಕೈಜೋಡಿಸಿದ ವೆಂಕಟೇಶ್ 2ನೇ ವಿಕೆಟ್ ಜೊತೆಯಾಟದಲ್ಲಿ 72 ರನ್ ಸೇರಿಸಿ ತಂಡವನ್ನು ಆಧರಿಸಿದರು.
ಅರ್ಷದೀಪ್ ಸಿಂಗ್(3-32) ಹಾಗೂ ರವಿ ಬಿಷ್ನೋಯ್(2-22)ಐದು ವಿಕೆಟ್ ಗಳನ್ನು ಹಂಚಿಕೊಂಡರು.