ಉತ್ತರಪ್ರದೇಶದ ‘ಒಂದು ಜಿಲ್ಲೆ-ಒಂದು ಉತ್ಪನ್ನ' ಯೋಜನೆಯ ಬ್ರಾಂಡ್ ಅಂಬಾಸಿಡರ್ ಆಗಿ ಕಂಗನಾ ರಣಾವತ್ ನೇಮಕ

Update: 2021-10-02 05:48 GMT
Photo source: Twitter/@navneetsehgal3

ಲಕ್ನೋ: ಉತ್ತರ ಪ್ರದೇಶ ಸರಕಾರ ತನ್ನ ಮಹತ್ವಾಕಾಂಕ್ಷೆಯ 'ಒಂದು ಜಿಲ್ಲೆ-ಒಂದು ಉತ್ಪನ್ನ' ಕಾರ್ಯಕ್ರಮದ ಬ್ರಾಂಡ್ ಅಂಬಾಸಿಡರ್ ಆಗಿ ನಟಿ ಕಂಗನಾ ರಣಾವತ್ ಅವರನ್ನು ಶುಕ್ರವಾರ ಹೆಸರಿಸಿದೆ.

ನಟಿ ರಣಾವತ್ ಅವರು  ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾದರು.

ರಾಜ್ಯದ 75 ಜಿಲ್ಲೆಗಳಾದ್ಯಂತ ಉತ್ಪನ್ನ-ನಿರ್ದಿಷ್ಟ ಸಾಂಪ್ರದಾಯಿಕ ಕೈಗಾರಿಕಾ ಕೇಂದ್ರಗಳನ್ನು ರಚಿಸುವ ಉದ್ದೇಶದಿಂದ ಉತ್ತರಪ್ರದೇಶ ಸರಕಾರವು ಒಂದು ಜಿಲ್ಲೆ-ಒಂದು ಉತ್ಪನ್ನ (ಒಡಿಒಪಿ) ಕಾರ್ಯಕ್ರಮವನ್ನು ಆರಂಭಿಸಿದೆ.

 "ಖ್ಯಾತ ನಟಿ ಕಂಗನಾ ರಣಾವತ್... ಯುಪಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿದರು. ಸಿಎಂ  ಆಕೆಗೆ ಓಡಿಒಪಿ ಉತ್ಪನ್ನವನ್ನು ನೀಡಿದರು. ಕಂಗನಾ  ಒಡಿಒಪಿಗೆ ನಮ್ಮ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ’’ ಎಂದು  ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಮಾಹಿತಿ) ನವನೀತ್ ಸೆಹಗಲ್ ಅವರು ಟ್ವೀಟಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News