ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಇಂದು ಉದ್ಘಾಟನೆ

Update: 2021-10-02 05:41 GMT
photo: twitter@AnandSinghBS
 

ಬೆಂಗಳೂರು,ಅ.2: ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಯು ಇಂದು (ಶನಿವಾರ ಅ.2) ವಿದ್ಯುಕ್ತವಾಗಿ ಅಸ್ತಿತ್ವಕ್ಕೆ ಬರಲಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಜೆ 6ಕ್ಕೆ ಹೊಸ ಜಿಲ್ಲೆ ಉದ್ಘಾಟಿಸಲಿದ್ದಾರೆ. ಉದ್ಘಟನಾ ಸಮಾರಂಭವು ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. 

ವಿಜಯನಗರ ಜಿಲ್ಲೆಗೆ ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದ್ದು, ಬಳ್ಳಾರಿ ಜಿಲ್ಲೆಯಲ್ಲಿದ್ದ ಹೊಸಪೇಟೆ, ಹರಪನಹಳ್ಳಿ, ಹೂವಿನಹಡಗಲಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ ತಾಲೂಕುಗಳನ್ನು ಜಿಲ್ಲೆಗೆ ಸೇರ್ಪಡೆಯಾಗಲಿವೆ.

ಬಳ್ಳಾರಿ ಜಿಲ್ಲೆಯಲ್ಲಿ 11 ತಾಲೂಕುಗಳು ಮತ್ತು ಮೂರು ಕಂದಾಯ ಉಪವಿಭಾಗಳಿದ್ದವು. ಸದ್ಯ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ರಚಿಸಿರುವ ಕಾರಣ ಆರು ತಾಲೂಕುಗಳು ಹೊಸ ಜಿಲ್ಲೆಗೆ ಸೇರ್ಪಡೆಯಾಗಿದೆ. ಹೀಗಾಗಿ ಬಳ್ಳಾರಿ ಜಿಲ್ಲೆಯಲ್ಲಿ ಸದ್ಯ ಐದು ತಾಲೂಕುಗಳು ಉಳಿದಿವೆ. ಬಳ್ಳಾರಿ, ಸಿರಗುಪ್ಪ, ಸಂಡೂರು, ಕಂಪ್ಲಿ ಮತ್ತು ಕುರಗೋಡು ತಾಲೂಕುಗಳು ಬಳ್ಳಾರಿ ಜಿಲ್ಲೆಯ ಭಾಗವಾಗಿ ಮುಂದುವರಿಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News