×
Ad

ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಸಣೆ ಪರಿಪಾಠ ಬೆಳೆಸಿಕ್ಕೊಳ್ಳಿ: ಡಾ.ಕೃಷ್ಣಾನಂದ ಶೆಟ್ಟಿ

Update: 2021-10-02 14:20 IST

ಕಾರ್ಕಳ, ಅ.2: ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಸಣೆ ನಡೆಸುವ ಪರಿಪಾಠ ಬೆಳೆಸಿಕೊಳ್ಳುವುದು ಉತ್ತಮ. ಮನುಷ್ಯನ ದೈಹಿಕ, ಮಾನಸಿಕ ಬೆಳವಣಿಗೆಗೆ ಪೂರಕವಾಗುವ ಜೊತೆಗೆ ರೋಗಗಳ ಪತ್ತೆ ಮೊದಲ ಹಂತದಲ್ಲಿ ಪತ್ತೆ ಹಚ್ಚಲು ಸಹಕಾರಿಯಾಗುತ್ತದೆ ಎಂದು ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ.ಕೃಷ್ಣಾನಂದ ಶೆಟ್ಟಿ ಕರೆ ತಿಳಿಸಿದ್ದಾರೆ.

ಅವರು ಕಾರ್ಕಳದ ಎಸ್. ವಿ.ಟಿ. ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಕಾರ್ಕಳ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಹಯೋಗದೊಂದಿಗೆ ಲಯನ್ಸ್ ಕ್ಲಬ್  ಕಾರ್ಕಳ ನೇತೃತ್ವದಲ್ಲಿ ನಡೆದ ವಿಶೇಷ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಾರ್ಕಳ ಲಯನ್ಸ್ ಕ್ಲಬ್ ಅಧ್ಯಕ್ಷ ರಾಜೇಶ್ ಶೆಣೈ ಮಾತನಾಡಿ,  ಹದಿಹರೆಯದ ವಿದ್ಯಾರ್ಥಿಗಳಲ್ಲಿ ಮಾನಸಿಕ ಹಾಗೂ ದೈಹಿಕ ಬದಲಾವಣೆಗಳು ಸಹಜ. ಯೋಗ, ವ್ಯಾಯಾಮ, ಧ್ಯಾನದ ಮೂಲಕ ಮನಸ್ಸಿನ ಏಕಾಗ್ರತೆ ಹೆಚ್ಚಿಸಲು ಹಾಗೂ ಮಾನಸಿಕ ಖಿನ್ನತೆಯನ್ನು ಸರಿಪಡಿಸಬಹುದು. ಹೆಚ್ಚಿನ ಚಿಕಿತ್ಸೆಯ ಅಗತ್ಯ ಬಂದಲ್ಲಿ ಲಯನ್ಸ್ ಕ್ಲಬ್ ಸಹಕಾರ ನೀಡಲಿದೆ ಎಂದರು

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ನಿತ್ಯಾನಂದ ಭಂಡಾರಿ , ಕೋಶಾಧಿಕಾರಿ ಪ್ರಕಾಶ್ ಪಿಂಟೋ, ತಜ್ಞ ವೈದ್ಯರುಗಳಾದ ಡಾ.ನಾಗರಾಜ್, ಡಾ.ಸೌಜನ್ಯಾ, ಡಾ.ಸಹಾನಾ, ಕಾರ್ಕಳ ಪುರಸಭಾ ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್ , ಲಯನ್ಸ್ ಕ್ಲಬ್ ಸದಸ್ಯರಾದ ಪ್ರವೀಣ್ ಕುಮಾರ್ , ರವೀಂದ್ರ ಸಾಲ್ಯಾನ್, ನೇವಿಲ್ ಡಿಸೋಜ, ಪ್ರಕಾಶ್ ರಾವ್, ರಾಬರ್ಟ್ ಡಿಮೆಲ್ಲೊ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News