ರಾಜ್ಯದ ಹಲವೆಡೆ ಅ.5ರವರೆಗೆ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ

Update: 2021-10-02 12:02 GMT
ಫೈಲ್ ಚಿತ್ರ

ಬೆಂಗಳೂರು, ಅ.2: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಂಡ ಹಿನ್ನೆಲೆಯಲ್ಲಿ ಅ.5ರವರೆಗೆ ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.   

ಹಾಸನ ಮತ್ತು ಚಿಕ್ಕಮಗಳೂರಿನಲ್ಲಿ ಅ.3ರಂದು ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗಿಗೆ ಅ.4 ಮತ್ತು 5 ರಂದು ಆರೆಂಜ್ ಅಲರ್ಟ್ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. 

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರಕ್ಕೆ ಅ.4 ಹಾಗೂ 5 ರಂದು ಯೆಲ್ಲೋ ಅಲರ್ಟ್ ಇರಲಿದೆ.

ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೂನ್ ಹಾಗೂ ಜುಲೈ ತಿಂಗಳಲ್ಲಿ ರಾಜ್ಯದ ಹಲವೆಡೆ ಭಾರಿ ವರ್ಷಧಾರೆಯಾಗಿತ್ತು. ಜುಲೈ ತಿಂಗಳಲ್ಲಿ ಬಿದ್ದ ಮಳೆಯ ವೇಳೆ ನದಿ, ಹಳ್ಳಕೊಳ್ಳ, ಕೆರೆಗಳು ಉಕ್ಕಿ ಹರಿದಿದ್ದವು. ಹಲವೆಡೆ ಪ್ರವಾಹ ಸ್ಥಿತಿ ಉಂಟಾಗಿತ್ತು. ಜನಜೀವನ ಅಸ್ತವ್ಯಸ್ತವಾಗಿತ್ತು. ಆಗಸ್ಟ್ ಮೊದಲ ವಾರದಲ್ಲಿಯೂ ಕರಾವಳಿ, ಮಳೆನಾಡು ಭಾಗಗಳಲ್ಲಿ ಮಳೆಯಾಗಿತ್ತು. ನಂತರ ಅಬ್ಬರ ಕಡಿಮೆಯಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News