×
Ad

ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಗಾಂಧಿ ಜಂಯತಿ ಆಚರಣೆ

Update: 2021-10-02 18:26 IST

ಕುಂದಾಪುರ, ಅ.2: ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶನಿವಾರ ಗಾಂಧಿ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬ್ಯಾರೀಸ್ ಶಿಕ್ಷ ಮತ್ತು ಶಿಕ್ಷಣ ಫೌಂಡೇಶನ್‌ನಿಂದ ಬ್ಯಾರೀಸ್ ಸಂಸ್ಥೆಗಳ ಸಿಬ್ಬಂದಿಯವರಿಗೆ, ಅವರ ಮಕ್ಕಳ ವಿದ್ಯಾಭಾಸಕ್ಕಾಗಿ ಪ್ರತಿ ವರ್ಷ ಕೊಡಮಾಡುವ ಸಹಾಯ ಧನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾರೀಸ್ ಸಮೂಹ ಸಂಸ್ಥೆಗಳ ನಿರ್ದೇಶಕ ದೋಮ ಚಂದ್ರಶೇಖರ್, ಆರ್ಥಿಕ ಮುಗ್ಗಟ್ಟಿನಿಂದಾಗಿ ಬ್ಯಾರೀಸ್ ಸಂಸ್ಥೆಗಳಲ್ಲಿರುವ ಸಿಬ್ಬಂದಿಯವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದೊಂದಿಗೆ ಸ್ಥಾಪನೆಗೊಂಡ ಈ ಸಂಸ್ಥೆ, ಬ್ಯಾರೀಸ್ ಗ್ರೂಪ್ ಅಧ್ಯಕ್ಷ ಸೈಯ್ಯದ್ ಮೊಹಮ್ಮದ್ ಬ್ಯಾರಿ ಅವರ ಕಾಳಜಿಯ ಪ್ರತೀಕವಾಗಿದೆ ಎಂದರು.

ಗಾಂಧೀಜಿಯವರ ಶಿಕ್ಷಣದ ಕಲ್ಪನೆಯ ಕುರಿತು ಮಾತನಾಡಿದ ಅವರು, ಇದೇ ದಿನ ಜನಿಸಿದ ಇನ್ನೋರ್ವ ಧೀಮಂತ ನಾಯಕ ಲಾಲ್ ಬಹುದ್ದೂರ್ ಶಾಸ್ತ್ರೀಯವರನ್ನು ನೆನಪಿಸಿ, ಇಂತಹ ಅಪೂರ್ವ ಮಹಾನ್ ವ್ಯಕ್ತಿಗಳ ಚರಿತ್ರೆ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಕನ್ನಡ ಉಪನ್ಯಾಸಕ ಸಂದೀಪ್ ಶೆಟ್ಟಿ ಗಾಂಧಿ ಮತ್ತು ಶಾಸ್ತ್ರೀಯವರ ವ್ಯಕ್ತಿತ್ವಗಳ ಕುರಿತು ಮಾತನಾಡಿದರು. ಸಹಾಯ ಧನವನ್ನು ವಿತರಿಸಿದ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಅಬ್ದುಲ್ ರಹ್ಮಾನ್ ಮಾತನಾಡಿ, ಗಾಂಧೀಜಿ ಮತ್ತು ಇತರ ನಾಯಕರ ಹೋರಾಟದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಿತಿದೆ. ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ನಮ್ಮ ದೇಶವನ್ನು ಕಟ್ಟೋಣ ಎಂದು ತಿಳಿಸಿದರು.

ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಸಿದ್ದಪ್ಪಕೆ.ಎಸ್. ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News