ಗಾಂಧಿಜಯಂತಿಯ ಪ್ರಯುಕ್ತ ಸೌಹಾರ್ದ ಕ್ರಿಕೆಟ್ ಪಂದ್ಯಾಟ
ಮಂಗಳೂರು, ಅ.2.:ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಜಿಲ್ಲಾಡಳಿತ ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್‌ಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಟೂರ್ನಮೆಂಟ್ಗೆ ಅಡ್ಯಾರ್‌ನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಸದಾ ಕೆಲಸದ ಒತ್ತಡದಲ್ಲಿರುವ ಅಧಿಕಾರಿಗಳು ಮತ್ತು ಪತ್ರಕರ್ತರ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಲು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಿರುವುದು ಶ್ಲಾಘನೀಯ ಎಂದರು.
ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.. ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋಣಾವನೆ ಋಷಿಕೇಶ್ ಭಗವಾನ್, ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತ ಮದನ್ ಮೋಹನ್, ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್‌ನ ಅಧ್ಯಕ್ಷ ಡಾ.ಮಂಜುನಾಥ ಭಂಡಾರಿ ಶುಭ ಹಾರೈಸಿದರು.
ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ, ವೈದ್ಯ ಡಾ.ಅವಿನಾಶ್, ದ.ಕ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.
ಟೂರ್ನಮೆಂಟ್‌ನಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಇಲೆವೆನ್, ಕುಲಪತಿ, ಸಹ್ಯಾದ್ರಿ, ಪತ್ರಕರ್ತರ ನಗರ ಮತ್ತು ಗ್ರಾಮೀಣ ತಂಡಗಳು ಭಾಗವಹಿಸಿದ್ದವು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ವಿಜಯ್ ಕೋಟ್ಯಾನ್ ಕಾರ್ಯ ಕ್ರಮ ನಿರೂಪಿಸಿದರು.