ವಿಕಾಸ್ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ
Update: 2021-10-02 19:55 IST
ಮಂಗಳೂರು; ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆಯನ್ನು ಕ್ಯಾಂಪಸ್ ಆವರಣದಲ್ಲಿ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ವಿಕಾಸ್‍ನ ಸಂಯೋಜಕರಾದ ಪಾರ್ಥಸಾರಥಿ ಜೆ ಪಾಲೆಮಾರ್, ಪದವಿ ಕಾಲೇಜಿನ ಪ್ರಾಂಶುಪಾಲೆ ಐಶ್ವರ್ಯ ಕೆ, ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಜಯ್ ಠಾಕೂರ್ ಉಪಸ್ಥಿತರಿದ್ದರು.
ನಂತರ ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳಾದ ಲಕ್ಷ್ಮಿ, ಅಲೀನಾ ಮತ್ತು ಸಿದ್ಧಿ ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಕುರಿತಂತೆ ಮಾಹಿತಿಯುಕ್ತ ಭಾಷಣ ಮಾಡಿದರು. ಫಿಸಿಯೋ ಪ್ರೇಮ್ ಶಾ ಅವರು ಸ್ವಾಗತಿಸಿದರು, ಶ್ರೀದೇವಿ ಕಿಣಿ ವಂದಿಸಿದರು. ಈ ಸಂದರ್ಭದಲ್ಲಿ ಪ್ರಾಧ್ಯಾಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.