ರಾಜ್ಯದಲ್ಲಿ ಕೊರೋನ ಅಬ್ಬರ ಇಳಿಮುಖ: ಶನಿವಾರ 636 ಮಂದಿಗೆ ಕೊರೋನ ದೃಢ, 4 ಮಂದಿ ಮೃತ್ಯು

Update: 2021-10-02 15:28 GMT

ಬೆಂಗಳೂರು, ಅ.2: ರಾಜ್ಯದಲ್ಲಿ ಕೊರೋನ ವೈರಸ್ ಅಬ್ಬರ ಸ್ವಲ್ಪ ಕಡಿಮೆಯಾದಂತೆ ಕಾಣಿಸುತ್ತಿದೆ. ಶನಿವಾರ ಕೇವಲ 636 ಜನರಿಗೆ ಕೊರೋನ ವೈರಸ್ ಇರುವುದು ದೃಢಪಟ್ಟಿದ್ದು,  4 ಜನರು ಸೋಂಕಿಗೆ ಬಲಿಯಾಗಿದ್ದಾರೆ. 

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,77,225ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,811ಕ್ಕೆ ತಲುಪಿದೆ.  

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 12,356ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

4 ಸೋಂಕಿತರು ಬಲಿ: ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 1, ಉತ್ತರ ಕನ್ನಡ  ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 636 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 2, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 245, ಚಾಮರಾಜನಗರ 6, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 20, ಚಿತ್ರದುರ್ಗ 4, ದಕ್ಷಿಣ ಕನ್ನಡ 100, ದಾವಣಗೆರೆ 2, ಧಾರವಾಡ 3, ಹಾಸನ 44, ಹಾವೇರಿ 1, ಕೊಡಗು 28, ಕೋಲಾರ 7, ಕೊಪ್ಪಳ 3, ಮಂಡ್ಯ 13, ಮೈಸೂರು 44, ರಾಯಚೂರು 1, ರಾಮನಗರ 2, ಶಿವಮೊಗ್ಗ 22, ತುಮಕೂರು 30, ಉಡುಪಿ 25, ಉತ್ತರ ಕನ್ನಡ 14, ವಿಜಯಪುರ ಜಿಲ್ಲೆಯಲ್ಲಿ 1 ಪ್ರಕರಣ ಪತ್ತೆಯಾಗಿದೆ.  

ರಾಜಧಾನಿಯಲ್ಲಿ 245 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಶನಿವಾರದಂದು 245 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,46,896 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,161 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,23,069 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News