ಅ.5: ಮುಸ್ಲಿಂ ಎಜುಕೇಶನಲ್ ಇನ್‌ಸ್ಟಿಟ್ಯೂಶನ್ಸ್ ಫೆಡರೇಶನ್ ನಿಂದ ಎನ್‌ಇಪಿ ಕುರಿತು ಕಾರ್ಯಾಗಾರ
Update: 2021-10-02 21:33 IST
ಮಂಗಳೂರು : ಮುಸ್ಲಿಂ ಎಜುಕೇಶನಲ್ ಇನ್‌ಸ್ಟಿಟ್ಯೂಶನ್ಸ್ ಫೆಡರೇಶನ್ (ಎಂಇಐಎಫ್) ದ.ಕ. ಮತ್ತು ಉಡುಪಿ ಜಿಲ್ಲಾ ವತಿಯಿಂದ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ (ಎನ್‌ಇಪಿ) ಬಗ್ಗೆ ಕಾರ್ಯಾಗಾರ ಮತ್ತು ಎಸೆಸೆಲ್ಸಿ, ಪಿಯುಸಿ, ಸಿಇಟಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಅ.5ರಂದು ಬೆಳಗ್ಗೆ 10 ಗಂಟೆಗೆ ನಗರದ ಕಂಕನಾಡಿಯಲ್ಲಿರುವ ಜಂಇಯ್ಯತುಲ್ ಫಲಾಹ್ ಸಭಾಂಗಣದಲ್ಲಿ ನಡೆಯಲಿದೆ.
ಗೋಕರ್ಣನಾಥೇಶ್ವರ ಕಾಲೇಜಿನ ಪ್ರಾಂಶುಪಾಲೆ ಡಾ. ದೀಪ್ತಿ ನಾಯಕ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಎಂಇಐಎಫ್ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾವೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರೊ. ಲೂಯಿಸ್ ಮನೋಜ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಡಿಡಿಪಿಐ ಮಲ್ಲೇಸ್ವಾಮಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.