ದ.ಕ. ಜಿಲ್ಲೆ : 100 ಮಂದಿಗೆ ಕೊರೋನ ಸೋಂಕು
Update: 2021-10-02 21:39 IST
ಮಂಗಳೂರು, ಅ.2: ದ.ಕ. ಜಿಲ್ಲೆಯಲ್ಲಿ 100 ಮಂದಿಗೆ ಕೊರೋನ ಸೋಂಕು ತಗುಲಿದ್ದು, ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ.
ಜಿಲ್ಲೆಯಲ್ಲಿ 109 ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇ.0.99ರಷ್ಟು ದಾಖಲಾಗಿದೆ. ಜಿಲ್ಲೆಯಲ್ಲಿನ 1,14,488 ಸೋಂಕಿತರ ಪೈಕಿ 1,11,906 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಕೋವಿಡ್‌ಗೆ 1,662 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 920 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.