ಬೆಳ್ತಂಗಡಿ : ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ
Update: 2021-10-02 22:54 IST
ಬೆಳ್ತಂಗಡಿ : ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನವನ್ನು ಆಚರಿಸಲಾಯಿತು.
ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಜಿನೇಂದ್ರ ಕುಮಾರ್ ಜೈನ್ ಅವರು ಮಹಾತ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪೋಷಕರ ಸಹಕಾರದಿಂದ ಶಾಲಾ ಆವರಣದಲ್ಲಿ ಸ್ವಚ್ಛತೆಯನ್ನು ಮಾಡಲಾಯಿತು. ಶಾಲಾ ಮಕ್ಕಳು ಸರ್ವಧರ್ಮ ಪ್ರಾರ್ಥನೆಯನ್ನು ನಡೆಸಿಕೊಟ್ಟರು. ಪಾರಾಸ್ ಪೃಥ್ವಿ ಜುವೆಲ್ಲರ್ಸ್ ಬೆಳ್ತಂಗಡಿ ಇಲ್ಲಿನ ಸಿಬ್ಬಂದಿ ವರ್ಗ ಈ ಕಾರ್ಯಕ್ರಮಕ್ಕೆ ಸಹಕರಿಸಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜೊತೆಗೆ ಎಸ್ಡಿಎಂಸಿ ಸದಸ್ಯರು, ಪೋಷಕರು ಮತ್ತು ಶಿಕ್ಷಕರು ಭಾಗವಹಿಸಿದ್ದರು.