ಕಾರ್ಕಳ: ವನ್ಯಜೀವಿ ಸಪ್ತಾಹದ ಪ್ರಯುಕ್ತ ಜನಜಾಗೃತಿ, ಸೈಕಲ್ ಜಾಥ
ಕಾರ್ಕಳ: ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ವತಿಯಿಂದ 67ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ವನ್ಯಜೀವಿಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬಂಡೀಮಠ, ಅನಂತಶಯನ, ಆನೆಕೆರೆ ಮಾರ್ಗವಾಗಿ ಜಾಥಾ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮವನ್ನು ಕಾರ್ಕಳ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ.ರುಥ್ರನ್ ಉದ್ಘಾಟಿಸಿದರು. ವಿಭಾಗದ ಸುಮಾರು 60ಕ್ಕೂ ಹೆಚ್ಚಿನ ಅಧಿಕಾರಿ ಮತ್ತು ಸಿಬ್ಬಂದಿಯವರು ಜಾಥದಲ್ಲಿ ಪಾಲ್ಗೊಂಡಿದ್ದರು.
ಮುಂಬರುವ ಶೋಲಾ ಹಬ್ಬದ ಆಚರಣೆಯನ್ನು ಪ್ರತಿಬಿಂಬಿಸುವ ಶೋಲಾ ಅರಣ್ಯದ ಸ್ತಬ್ದಚಿತ್ರವನ್ನು ಇದೇ ಸಂದರ್ಭದಲ್ಲಿ ಅನಾವರಣಗೊಳಿಸಲಾಯಿತು. ಈ ಸ್ತಬ್ಧಚಿತ್ರ ಈ ವಿಭಾಗದ ವ್ಯಾಪ್ತಿಯಲ್ಲಿ ಬರುವ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸತ ಎಂಟು ದಿನಗಳ ಕಾಲ ಸಂಚರಿಸಲಿದೆ.
ಸೈಕಲ್ ಜಾಥಕ್ಕೆ ಚಾಲನೆ: 67ನೇ ವನ್ಯಜೀವಿ ಸಪಾತಿಹದ ಅಂಗವಾಗಿ ಕುದುರೆಮುಖ ವನ್ಯಜೀವಿ ವಿಭಾಗದಿಂದ ವನ್ಯಜೀವಿ ಅರಿವು ಮೂಡಿಸಲು ಸೈಕಲ್ ಜಾಥ ಕಾರ್ಯಕ್ರಮವನ್ನು ರವಿವಾರ ಮುಳ್ಳೂರು ತನಿಖಾ ಠಾಣೆಯಿಂದ ಕುದುರೆಮುಖದವರೆಗೆ ಹಮ್ಮಿಕೊಳ್ಳಲಾಗಿತ್ತು.
ಈ ಜಾಥವನ್ನು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಉದ್ಘಾಟಿಸಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಕಾರ್ಕಳ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ.ರುಥ್ರನ್ ಉಪಸ್ಥಿತರಿ ದ್ದರು. ಸೈಕಲ್ ಜಾಥದಲ್ಲಿ ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಯ ಅನೇಕ ಸಾರ್ವಜನಿಕರು ಭಾಗವಹಿಸಿದ್ದರು.