ಮನೆಯಿಂದ ಆರಂಭಿಸಿದರೆ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಸಾಧ್ಯ: ಮೇರಿ ಡಿಸೋಜ
ಉಡುಪಿ, ಅ.3: ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಜವಾಬ್ದಾರಿ ಯಾಗಲು ಮೊದಲು ನಾವು ನಮ್ಮ ಮನೆಯಲ್ಲಿ ಪ್ಲಾಸ್ಟಿಕ್ ಉಪಯೋಗ ನಿಲ್ಲಿಸಿದಾಗ ಮಾತ್ರ ಸಾಧ್ಯ ಎಂದು ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಅಧ್ಯಕ್ಷ ಮೇರಿ ಡಿಸೋಜ ಹೇಳಿದ್ದಾರೆ.
ಕಥೊಲಿಕ್ ಸಭಾ ಉಡುಪಿ ಪ್ರದೇಶ, ಉಡುಪಿ ವಲಯ, ಉದ್ಯಾವರ ಘಟಕ ಹಾಗೂ ಇತರ ಸಹಭಾಗಿ ಸಂಘಟನೆಗಳ ನೇತೃತ್ವದಲ್ಲಿ ಶನಿವಾರ ಆಯೋಜಿಸ ಲಾದ ಗಾಂಧಿ ಜಯಂತಿ ಮತ್ತು ನಿರ್ಮಲ ಪರಿಸರ ನಮ್ಮ ಕರ್ತವ್ಯ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.
ಇಂದು ಪ್ಲಾಸ್ಟಿಕ್ನ ಅತಿಯಾದ ಬಳಕೆಯಿಂದ ನಮ್ಮ ಪರಿಸರ ಸಂಪೂರ್ಣ ವಾಗಿ ಕಲುಷಿತಗೊಂಡಿದ್ದು ಇದರಿಂದ ಎಲ್ಲಾ ರೀತಿಯ ಮಾಲಿನ್ಯಕ್ಕೆ ಆಹ್ವಾನ ಮಾಡಿಕೊಟ್ಟಂತಾಗಿದೆ. ಪ್ರತಿಯೊಬ್ಬರು ಪ್ಲಾಸ್ಟಿಕ್ ಬಳಸುವುದನ್ನು ಬಿಟ್ಟು ಮರು ಬಳಕೆಯಾಗುವಂತಹ ವಸ್ತುಗಳಿಗೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ. ಪ್ಲಾಸ್ಟಿಕ್ ನಿರ್ಮೂಲನೆ ಕೇವಲ ಹೇಳಿಕೆಗೆ ಸೀಮಿತವಾಗದೆ ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿ ಇದರನ್ನು ಕಾರ್ಯರೂಪಕ್ಕೆ ತಂದಾಗ ಮಾತ್ರ ಸ್ವಚ್ಚ ಪರಿಸರದ ಕನಸು ನನಸಾಗಲಿದೆ ಎಂದರು.
ಕಥೊಲಿಕ್ ಸಭಾ ಆಧ್ಯಾತಿಕ ನಿರ್ದೇಶಕ ವಂ.ಫರ್ಡಿನಾಂಡ್ ಗೊನ್ಸಾಲ್ವಿಸ್, ವಲಯ ಧರ್ಮಗುರು ವಂ.ಚಾರ್ಲ್ಸ್ ಮಿನೇಜಸ್, ಕೇಂದ್ರಿಯ ಸಮಿತಿಯ ನಿಯೋಜಿತ ಅಧ್ಯಕ್ಷ ಸಂತೋಷ್ ಕರ್ನೆಲಿಯೊ, ಉಪಾಧ್ಯಕ್ಷ ರೊನಾಲ್ಡ್ ಡಿ ಆಲ್ಮೇಡಾ, ಕಾರ್ಯದರ್ಶಿ ಗ್ರೆಗರಿ ಪಿಕೆ ಡಿಸೋಜ, ವಲಯ ಅಧ್ಯಕ್ಷ ಲವೀನಾ ಪಿರೇರಾ, ಘಟಕ ಅಧ್ಯಕ್ಷ ಆಲ್ವಿನ್ ಅಂದ್ರಾದೆ, ಸ್ಥಳೀಯ ಉದ್ಯಾವರ ಚರ್ಚಿನ ವಂ.ಝೇವಿಯರ್ ಪಿಂಟೊ, ಲಯನ್ಸ್ ಕ್ಲಬ್ ಅಧ್ಯಕ್ಷ ಗೋಡ್ ಫ್ರೀ ಡಿಸೋಜ, ಸ್ತ್ರೀ ಸಂಘಟನೆಯ ಅಧ್ಯಕ್ಷೆ ಐರಿನ್ ಪಿರೇರಾ, ಐಸಿವೈಎಂ ಸಂಘಟನೆಯ ಅಧ್ಯಕ್ಷ ಪ್ರಿತೇಶ ಪಿಂಟೋ ಮೊದಲಾದವರು ಉಪಸ್ಥಿತರಿದ್ದರು.