ದ.ಕ.: ಕೋವಿಡ್‌ಗೆ ಓರ್ವ ಬಲಿ; 76 ಮಂದಿಗೆ ಸೋಂಕು ದೃಢ

Update: 2021-10-03 14:08 GMT

ಮಂಗಳೂರು, ಅ.3: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿದ್ದು, ರವಿವಾರ 76 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಒಬ್ಬರು ಮೃತಪಟ್ಟಿದ್ದು, 103 ಮಂದಿ ಗುಣಮುಖರಾಗಿದ್ದಾರೆ.

ಪ್ರಸ್ತುತ ಜಿಲ್ಲೆಯ ಪಾಸಿಟಿವಿಟಿ ದರ ಶೇ.0.79ಕ್ಕೆ ಇಳಿದಿದೆ. ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 1,14,564ಕ್ಕೆ ಏರಿಕೆಯಾಗಿದ್ದು, ಅವರಲ್ಲಿ 1,12,009 ಮಂದಿ ಈಗಾಗಲೇ ಗುಣಮುಖರಾಗಿದ್ದಾರೆ. ಒಟ್ಟು 1,663 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 892 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News