ಉಡುಪಿ: ರವಿವಾರ 33 ಮಂದಿಗೆ ಕೋವಿಡ್ ಸೋಂಕು ದೃಢ

Update: 2021-10-03 15:46 GMT

ಉಡುಪಿ, ಅ.2: ಜಿಲ್ಲೆಯಲ್ಲಿ ರವಿವಾರ ಹೊಸದಾಗಿ 33 ಮಂದಿ ಕೋವಿಡ್- 19 ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ 61 ಮಂದಿ ಸೋಂಕಿನಿಂದ ಗುಣಮುಕ್ತರಾದರೆ, ಈಗಲೂ ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 103ಕ್ಕಿಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿಗೆ ಯಾರೂ ಬಲಿಯಾಗಿಲ್ಲ. ಈವರೆಗೆ ಜಿಲ್ಲೆಯಲ್ಲಿ 474 ಮಂದಿ ಮೃತಪಟ್ಟಿದ್ದಾರೆ. ದಿನದಲ್ಲಿ ಸೋಂಕು ದೃಢಪಟ್ಟ 33 ಮಂದಿಯಲ್ಲಿ 17 ಮಂದಿ ಪುರುಷರು ಹಾಗೂ 16 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ 17 ಮಂದಿ ಉಡುಪಿ ತಾಲೂಕಿನವರಾದರೆ, 12 ಮಂದಿ ಕುಂದಾಪುರ, ನಾಲ್ವರು ಕಾರ್ಕಳ ತಾಲೂಕಿನವರು. ಇವರಲ್ಲಿ ಇಬ್ಬರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ ಉಳಿದ 31 ಮಂದಿಗೆ ಮನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು 61 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 75,801ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 4541 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,378ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 11,45,505 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

219 ಮಂದಿಗೆ ಲಸಿಕೆ: ಇಂದು ಜಿಲ್ಲೆಯಲ್ಲಿ ಒಟ್ಟು 219 ಮಂದಿ ಲಸಿಕೆಯನ್ನು ಸ್ವೀಕರಿಸಿದ್ದು, ಇವರಲ್ಲಿ 113 ಮಂದಿ ಮೊದಲ ಡೋಸ್ ಹಾಗೂ 106 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 65 ಮಂದಿ ಮೊದಲ ಡೋಸ್ ಹಾಗೂ 68 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 48 ಮಂದಿ ಮೊದಲ ಡೋಸ್ ಹಾಗೂ 38 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.
ಇದುವರೆಗೆ ಜಿಲ್ಲೆಯಲ್ಲಿ 8,99,156 ಮಂದಿ ಮೊದಲ ಡೋಸ್ ಲಸಿಕೆಯನ್ನು ಹಾಗೂ 4,12,560 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News