×
Ad

ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್: ಕುಲಪತಿ ತಂಡ ಚಾಂಪಿಯನ್

Update: 2021-10-03 23:28 IST

ಮಂಗಳೂರು: ಮಂಗಳೂರು ವಿವಿ ಕುಲಪತಿ ತಂಡ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಜಿಲ್ಲಾಡಳಿತ, ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ಅಡ್ಯಾರ್‌ನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ ಫೈನಲ್‌ನಲ್ಲಿ ಮೀಡಿಯಾ ಗ್ರಾಮೀಣ ತಂಡವನ್ನು ಮಣಿಸಿ ಕುಲಪತಿ ತಂಡ ಟ್ರೋಫಿಯನ್ನು ಎತ್ತಿಕೊಂಡಿದೆ.

ಶನಿವಾರ ಸಂಜೆ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಬಹುಮಾನ ವಿತರಿಸಿದರು.

ಕುಲಪತಿ ಇಲೆವೆನ್‌ನ ಸಂದೀಪ್ ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ, ಅಶ್ವಥ್ ಬೆಸ್ಟ್ ಬ್ಯಾಟ್ಸ್‌ಮನ್, ಮೀಡಿಯಾ ಗ್ರಾಮೀಣ ತಂಡದ ಪುನೀತ್ ಬೆಸ್ಟ್ ಬೌಲರ್ ಪ್ರಶಸ್ತಿಯನ್ನು ಪಡೆದರು.

ಮುಖ್ಯ ಅತಿಥಿಗಳಾಗಿ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್‌ನ ಅಧ್ಯಕ್ಷ ಡಾ.ಮಂಜುನಾಥ ಭಂಡಾರಿ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆರ್. ರಾಮಕೃಷ್ಣ, ಕೆಯುಡಬ್ಲ್ಯುಜೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಭಾಗವಹಿಸಿದ್ದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News