×
Ad

ಉತ್ತರಪ್ರದೇಶ: ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ 45ಲಕ್ಷ ರೂ., ಸರಕಾರಿ ಉದ್ಯೋಗ ಘೋಷಣೆ

Update: 2021-10-04 14:13 IST
Photo: Twitter

ಸೀತಾಪುರ: ಉತ್ತರಪ್ರದೇಶ ಲಖೀಂಪುರ್‌ ಖೇರಿ ಎಂಬಲ್ಲಿ ಕೇಂದ್ರ ಸಚಿವರ ಪುತ್ರನೋರ್ವ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹಾಯಿಸಿದ್ದ ಪರಿಣಾಮ ಓರ್ವ ಮೃತಪಟ್ಟು ಹಲವರು ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ನಡೆದ ಹಿಂಸಾಚಾರದಲ್ಲಿ ಒಟ್ಟು ೮ ಮಂದಿ ಬಲಿಯಾಗಿದ್ದರು. ಇದೀಗ ಮೃತಪಟ್ಟ ರೈತರ ಕುಟುಂಬಕ್ಕೆ ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ ಪರಿಹಾರ ಘೋಷಣೆ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ 45ಲಕ್ಷ ರೂ. ಪರಿಹಾರ ಧನ, ಸರಕಾರಿ ಉದ್ಯೋಗ ನೀಡಲಾಗುವುದು ಎಂದು ಸರಕಾರ ಘೋಷಣೆ ಮಾಡಿದೆ. ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರ ಮುಖಾಂತರ ತನಿಖೆ ನಡೆಸಲಾಗುವುದು ಹಾಗೂ ಗಾಯಾಳುಗಳಿಗೆ ತಲಾ 10 ಲಕ್ಷ ರೂ. ನೀಡಲಾಗುವುದು ಎಂದು ಸರಕಾರ ತಿಳಿಸಿದೆ. 

ಈಗಾಗಲೇ ಕೇಂದ್ರ ಸಚಿವರ ಪುತ್ರನ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News