×
Ad

ಸುರಪುರ: ಮಹಿಳೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿ

Update: 2021-10-04 17:52 IST

ಸುರಪುರ: ಮಹಿಳೆ ಮೇಲೆ ವ್ಯಕ್ತಿಯೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ನಡೆದಿದೆ.

ಮಹಿಳೆ ಮನೆಯಲ್ಲಿ ರಾತ್ರಿ ವೇಳೆ ಮಲಗಿದ್ದ ಸಂದರ್ಭದಲ್ಲಿ ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ.

ಆರೋಪಿ ಗಂಗಪ್ಪ ಮನೆಯ ಬಾಗಿಲು ಮುಚ್ಚಿ ಈ  ದುಷ್ಕೃತ್ಯ ನಡೆಸಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಮಹಿಳೆಯ ಸಂಪೂರ್ಣ ದೇಹ ಸುಟ್ಟು ಹೋಗಿದ್ದು ಸುರಪುರ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಕಲಬುರ್ಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.‌ಸಿ ಬಿ ವೇದಮೂರ್ತಿ ನಿರ್ದೇಶನದ ಮೇರಗೆ ಪೊಲೀಸ್ ಇನ್ಸಪೆಕ್ಟರ್  ಸುನೀಲ್ ಮೂಲಿಮನಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News