×
Ad

ಪ್ರಿಯಾಂಕ ಗಾಂಧಿ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ : ಅಶೋಕ್ ಕುಮಾರ್ ಕೊಡವೂರು

Update: 2021-10-04 21:12 IST

ಉಡುಪಿ, ಅ.4: ಉತ್ತರ ಪ್ರದೇಶದ ಲಖೀಮ್‌ಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿ ಎಂಟು ಮಂದಿ ಮೃತರಾದವರ ಕುಟುಂಬಿಕರನ್ನು ಭೇಟಿಯಾಗಿ ಸಾಂತ್ವನ ಹೇಳಲು ತೆರಳುತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಲಕ್ನೋದಲ್ಲಿ ಬಂಧಿಸಿರುವುದು ಖಂಡನೀಯ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನಾಯಕ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ.

ಪ್ರಜಾಪ್ರಭುತ್ವ ದೇಶದಲ್ಲಿ ವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಮೊಟಕು ಗೊಳಿಸಿ ರುವುದು ದೇಶ ವಿಷಮ ಪರಿಸ್ಥಿತಿಯತ್ತ ತೆರಳುವ ಸ್ಪಷ್ಟ ಸೂಚನೆ ಆಗಿದೆ. ಈ ದೇಶದಲ್ಲಿ ಅನ್ನದಾತರಿಗೆ ರಕ್ಷಣೆ ಇಲ್ಲ, ರಕ್ಷಕರೇ ಭಕ್ಷಕರಾಗಿದ್ದಾರೆ. ಬಂಧನ ದಲ್ಲಿರಿಸಿದ ಪ್ರಿಯಾಂಕ ಗಾಂಧಿ ಅವರನ್ನು ಕೂಡಲೇ ಬಿಡುಗಡೆ ಗೊಳಿಸಬೇಕು ಎಂದು ಕೊಡವೂರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News