×
Ad

ಕುಂದಾಪುರ : ಅನಧಿಕೃತ ಕ್ಲಿನಿಕ್‌ಗೆ ಬೀಗ

Update: 2021-10-04 21:19 IST

ಕುಂದಾಪುರ, ಅ.4: ತಾಲೂಕಿನ ಬಂಟ್ವಾಡಿಯಲ್ಲಿ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿದ್ದ ಮೂಕಾಂಬಿಕಾ ಖಾಸಗಿ ಕ್ಲಿನಿಕ್‌ನ್ನು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಾ ಪ್ರಾಧಿಕಾರ ಉಡುಪಿ ಇದರ ಅಡಿಯಲ್ಲಿ ಕುಂದಾಪುರ ತಾಲೂಕಿನ ಆರೋಗ್ಯಾಧಿಕಾರಿ ಡಾ.ರಾಜೇಶ್ವರಿ ತನಿಖೆ ಮಾಡಿ ಇತ್ತೀಚೆಗೆ ಮುಚ್ಚಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಕೆಪಿಎಂಇ ನೋಡಲ್ ಅಧಿಕಾರಿ ಡಾ.ರಾಮ ರಾವ್ ಕೆ., ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಪ್ರತಾಪ್, ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಆಯುಷ್ ವೈದ್ಯಾಧಿಕಾರಿ ಡಾ.ಅಶೋಕ್, ಕೆಪಿಎಂಇ ವಿಷಯ ನಿರ್ವಾಹಕ ಸುಬ್ರಮಣ್ಯ ಶೇರಿಗಾರ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News