ಟೆಂಡರ್ ಪ್ರಕ್ರಿಯೆ ನಡೆಸದೆ ಮಳಿಗೆಗಳ ಹಂಚಿಕೆ: ಲೋಕಾಯುಕ್ತ ತನಿಖೆಗೆ ವಹಿಸಿದ ಹೈಕೋರ್ಟ್
Update: 2021-10-04 22:21 IST
ಬೆಂಗಳೂರು, ಅ.4: ಜಯನಗರ ವಾಣಿಜ್ಯ ಸಂಕೀರ್ಣದಲ್ಲಿರುವ ಕೆಲ ಮಳಿಗೆಗಳನ್ನು ಟೆಂಡರ್ ಪ್ರಕ್ರಿಯೆ ನಡೆಸದೆ ಹಂಚಿಕೆ ಮಾಡಿರುವ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಿ ಹೈಕೋರ್ಟ್ ಆದೇಶಿಸಿದೆ.
ಈ ಕುರಿತು ಶ್ರೀನಗರದ ರಾಘವೇಂದ್ರ ಬ್ಲಾಕ್ ನಿವಾಸಿ ಎಂ. ಶರಣು 2019ರಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ ಸೋಮವಾರ ಈ ಆದೇಶ ಮಾಡಿದೆ.
ಲೋಕಾಯುಕ್ತ ತನಿಖೆಗೆ ಪೂರ್ಣ ಸಹಕಾರ ನೀಡಬೇಕು ಮತ್ತು ತನಿಖೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲೋಕಾಯುಕ್ತಕ್ಕೆ ಒದಗಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನ್ಯಾಯಪೀಠ ಸೂಚನೆ ನೀಡಿ ವಿಚಾರಣೆಯನ್ನು ಮುಂದಿನ ವರ್ಷ ಜನವರಿ ತಿಂಗಳಿಗೆ ಮುಂದೂಡಿತು.