ಹೂವಿನಹಡಗಲಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಟ್ಟ ಪ್ರಕರಣ: ಕುಟುಂಬಕ್ಕೆ 3ಲಕ್ಷ ರೂ.ಪರಿಹಾರ ಘೋಷಿಸಿದ ಸಿಎಂ

Update: 2021-10-05 13:05 GMT

ಬೆಂಗಳೂರು, ಅ. 5: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರಕಾರ ತಲಾ 3 ಲಕ್ಷ ರೂ.ಪರಿಹಾರ ಘೋಷಣೆ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದಿಲ್ಲಿ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಪ್ರಕರಣದ ಬಗ್ಗೆ ಹಿರಿಯ ಐಎಎಸ್ ಅಧಿಕಾರಿ ಮನೀಶ್ ಮೌದ್ಗಿಲ್ ನೇತೃತ್ವದಲ್ಲಿ ತನಿಖೆಗೆ ಸೂಚಿಸಲಾಗಿದೆ.

ಇನ್ನು ಕುಡಿಯುವ ನೀರಿಗೆ ಯಾವ ರೀತಿಯಲ್ಲಿ ವಿಷ ಮಿಶ್ರಿಣ ಆಗಿದೆ ಎಂಬ ಬಗ್ಗೆ ವರದಿ ನೀಡಲು ಹೇಳಿದ್ದೇನೆ. ವರದಿ ಕೊಟ್ಟ ನಂತರ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ತೇನೆ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಸ್ಪಷ್ಟಣೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News