ವಿಧಾನಸಭೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ

Update: 2021-10-05 14:35 GMT

ಬೆಂಗಳೂರು: ಇದೇ ತಿಂಗಳ ಅಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಉಪಚುನಾವಣೆಗೆ ಸಿಂದಗಿ ಹಾಗೂ ಹಾನಗಲ್ ವಿಧಾನಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. 

ಸಿಂಧಗಿ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಎಂ.ಸಿ.ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ವಿಧಾನಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಪ್ರಕಟಿಸಿದ್ದಾರೆ.

ಎರಡೂ ವಿಧಾನಸಭೆ ಕ್ಷೇತ್ರಗಳಿಗೆ ಅ.30ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News