ಕೊಣಾಜೆ; ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ
Update: 2021-10-05 20:01 IST
ಕೊಣಾಜೆ : ಕಾಲೇಜಿನಿಂದ ಮನೆಯ ಕಡೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಅಡ್ಯಾರ್ ಕಣ್ಣೂರು ನಿವಾಸಿ ಯಾಕೂಬ್ (43) ಬಂಧಿತ ಆರೋಪಿ. ಮದ್ಯಾಹ್ನ ಕಾಲೇಜು ಮುಗಿಸಿ ಮನೆ ಕಡೆಗೆ ಹೋಗುತ್ತಿದ್ದಾಗ ವಿದ್ಯಾರ್ಥಿನಿಗೆ ಯಾಕೂಬ್ ಕಿರುಕುಳ ನೀಡಿರುವುದಾಗಿ ದೂರಲಾಗಿದ್ದು, ಗ್ರಾಮಸ್ಥರು ಕೊಣಾಜೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ.
ಆರೋಪಿಯನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದು, ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.