ಪ್ರಿಯಾಂಕಾ ಗಾಂಧಿಯನ್ನು ಅಕ್ರಮವಾಗಿ ಬಂಧನದಲ್ಲಿಡಲಾಗಿದೆ: ಸುಪ್ರೀಂಕೋರ್ಟ್ ಮಾಜಿ ನ್ಯಾಯಾಧೀಶ
Update: 2021-10-05 20:18 IST
ಹೊಸದಿಲ್ಲಿ: ಲಖಿಂಪುರ್ ನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ರೈತರನ್ನು ಭೇಟಿಯಾಗಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ಬಂಧಿಸಲಾಗಿತ್ತು. ಈ ಕುರಿತು ndtv.com ನೊಂದಿಗೆ ಮಾತನಾಡಿದ ಸುಪ್ರೀಂ ಕೋರ್ಟ್ ನ ಮಾಜಿ ನ್ಯಾಯಾಧೀಶ ಮದನ್ ಲೋಕೂರ್ "ಪ್ರಿಯಾಂಕಾರನ್ನು ಅಕ್ರಮವಾಗಿ ಬಂಧನದಲ್ಲಿಡಲಾಗಿದೆ" ಎಂದು ಹೇಳಿಕೆ ನೀಡಿದ್ದಾರೆ.
ಎನ್ಡಿಟಿವಿಯೊಂದಿಗೆ ಮಾತನಾಡಿದ ಮದನ್ ಲೋಕೂರ್ "ಪ್ರಿಯಾಂಕಾ ಗಾಂಧಿಯನ್ನು ಅಕ್ರಮವಾಗಿ ಬಂಧನದಲ್ಲಿಡಲಾಗಿದೆ. ಈ ಪ್ರಕರಣದ ಕುರಿತು ವಿವರವಾದ ತನಿಖೆ ನಡೆಸುವ ಅಗತ್ಯವಿದೆ. ಲಖಿಂಪುರ್ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿಸಿರುವುದು ನಡೆದಿರುವುದು ನಿಜಕ್ಕೂ ಭಯಾನಕ ವಿಚಾರವಾಗಿದೆ" ಎಂದು ಅವರು ಹೇಳಿಕೆ ನೀಡಿದ್ದಾರೆ.
ರೈತರು ಭೇಟಿಯಾಗಲು ತೆರಳುತ್ತಿದ್ದ ಪ್ರಿಯಾಂಕಾ ಗಾಂಧಿ, ದೀಪೇಂದರ್ ಹೂಡಾ ಮತ್ತು ಅಜಯ್ ಕುಮಾರ್ ಲಲ್ಲು ವಿರುದ್ಧ ಶಾಂತಿ ಭಂಗ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದರು.