×
Ad

ಅ.7ರಂದು ‘ಆತ್ಮಹತ್ಯೆ ನಿಯಂತ್ರಣ ಕುರಿತು ವಿಚಾರ ಸಂಕಿರಣ

Update: 2021-10-05 20:30 IST

ಉಡುಪಿ, ಅ.5: ಉಡುಪಿ ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ರೋಟರಿ ಮಣಿಪಾಲ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಡಿವಿಜಿ ಪುಣ್ಯ ಸ್ಮರಣೆ ಪ್ರಯುಕ್ತ ಮಾಧ್ಯಮದವರಿಗೆ ‘ಆತ್ಮಹತ್ಯೆ ನಿಯಂತ್ರಣ: ಸಾಮಾಜಿಕ ಜವಾಬ್ದಾರಿ’ ವಿಷಯದ ಕುರಿತು ವಿಚಾರ ಸಂಕಿರಣ ವನ್ನು ಅ.7ರಂದು ಬೆಳಗ್ಗೆ 11ಗಂಟೆಗೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಡಾ.ಪಿ.ವಿ.ಭಂಡಾರಿ, ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಕಮ್ಯೂ ನಿಕೇಶನ್ ಇದರ ಮಾಧ್ಯಮ ಅಧ್ಯಯನ ಕೇಂದ್ರದ ಮುಖ್ಯಸ್ಥೆ ಮತ್ತು ಸಹ ಪ್ರಾಧ್ಯಾಪಕಿ ಡಾ.ಶುಭ ಎಚ್.ಎಸ್. ಆಗಮಿಸಲಿರುವರು. ಜಿಲ್ಲಾ ಕಾರ್ಯ ನಿರತರ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News