ಮೀನು ಸಾಗಾಟದ ಲಾರಿ ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2021-10-05 21:38 IST
ಮಂಗಳೂರು, ಅ.5: ಮೀನು ಸಾಗಾಟದ ಲಾರಿ ಢಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರು ಬಳಿ ಸಂಭವಿಸಿದೆ.
ಉರ್ವಸ್ಟೋರ್ ನಿವಾಸಿ ನವೀನ್ (20) ಮೃತಪಟ್ಟವರು.
ಇವರು ಬೈಕ್‌ನಲ್ಲಿ ತೊಕ್ಕೊಟ್ಟು ಕಡೆಯಿಂದ ಪಂಪ್‌ವೆಲ್ ಕಡೆಗೆ ಬರುತ್ತಿದ್ದಾಗ ಹಿಂದಿನಿಂದ ಬಂದ ಮೀನು ಸಾಗಾಟದ ಲಾರಿ ಢಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.