ಲಖಿಂಪುರ್‌ ಖೇರಿಗೆ ಭೇಟಿ ನೀಡಲು ಕಾಂಗ್ರೆಸ್‌ ನಾಯಕರಿಗೆ ಅನುಮತಿ ನೀಡಿದ ಉತ್ತರಪ್ರದೇಶ ಸರಕಾರ

Update: 2021-10-06 08:23 GMT

ಲಕ್ನೊ: ಹಿಂಸಾಚಾರದಲ್ಲಿ ಎಂಟು ಮಂದಿ ಬಲಿಯಾಗಿರುವ ಉತ್ತರಪ್ರದೇಶದ ಲಖಿಂಪುರ್‌ ಖೇರಿಗೆ ಯಾವುದೇ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಲು ಸರಕಾರ ಅನುಮತಿಸಿರಲಿಲ್ಲ. ಈ ಕುರಿತು ಭಾರೀ ಆಕ್ರೋಶ ವ್ಯಕ್ತವಾಗುತ್ತಿರುವ ಮಧ್ಯೆ ಇದೀಗ ಉತ್ತರಪ್ರದೇಶ ಸರಕಾರವು ವಿರೋಧ ಪಕ್ಷ ನಾಯಕರ ಭೇಟಿಗೆ ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ.

ಈ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಹೊಸದಿಲ್ಲಿಯಿಂದ ಲಕ್ನೋಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದಾರೆ.

"ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಇತರ ಮೂವರು ಜನರಿಗೆ ಲಖಿಂಪುರ್ ಖೇರಿಗೆ ಭೇಟಿ ನೀಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ" ಎಂದು ಉತ್ತರ ಪ್ರದೇಶ ಸರ್ಕಾರದ ಗೃಹ ಇಲಾಖೆಯು ಮಾಹಿತಿ ನೀಡಿದೆ. ಹಿಂಸಾತ್ಮಕ ಘಟನೆಯಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಲು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ 5 ಸದಸ್ಯರ ನಿಯೋಗವು ಬುಧವಾರ ಉತ್ತರ ಪ್ರದೇಶದ ಲಖಿಂಪುರ್ ಖೇರಿಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News