ಅ.7ರಂದು ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ
ಉಡುಪಿ, ಅ. 6: ಜಿಲ್ಲಾಡಳಿತ, ಜಿಪಂ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ, ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ ಉಡುಪಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಉಡುಪಿ, ಕರ್ನಾಟಕ ನೌಕಾದಳ ಎನ್‌ಸಿಸಿ ಉಡುಪಿ, ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್ ಮತ್ತು ಯುವ ರೆಡ್‌ಕ್ರಾಸ್ ಘಟಕ ಹಾಗೂ ಉಡುಪಿ ಸರಕಾರಿ ಪಾಲಿಟೆಕ್ನಿಕ್‌ನ ಎನ್ನೆಸ್ಸೆಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಅ.7ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲದ ಅನಂತನಗರದಲ್ಲಿರುವ ಸರಕಾರಿ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ನಡೆಯಲಿದೆ.
ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯನ್ನು ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ. ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಸರಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲೆ ಸಹನಾ, ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರೆಗಾರ್, 6 ಕರ್ನಾಟಕ ನೌಕಾದಳ ಎನ್‌ಸಿಸಿಯ ಲೆ.ಕ. ರಿಕ್ಕಿ ಪೆರೇರಾ, ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್ ಅಧ್ಯಕ್ಷ ಆನಂದ್ ಗಾಣಿಗ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾ ಕುಮಾರಿ ಭಾಗವಹಿಸಲಿದ್ದಾರೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.