ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಕುಟುಂಬ ಭೇಟಿಯಾಗಲು ಲಖಿಂಪುರದತ್ತ ಹೊರಟ ರಾಹುಲ್, ಪ್ರಿಯಾಂಕಾ ಗಾಂಧಿ

Update: 2021-10-06 14:34 GMT

ಹೊಸದಿಲ್ಲಿ: ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ವಾದ್ರಾ, ಉತ್ತರಪ್ರದೇಶದ ಸೀತಾಪುರದ ಅತಿಥಿಗೃಹದಲ್ಲಿ ಮೂರು ದಿನಗಳ ಬಂಧನದ ನಂತರ ಬಿಡುಗಡೆಯಾಗಿದ್ದು, ಆಕೆಯ ಸಹೋದರ ರಾಹುಲ್ ಗಾಂಧಿ ಹಾಗೂ ಪಕ್ಷದ ತಂಡದೊಂದಿಗೆ ರವಿವಾರ ಲಖಿಂಪುರ ಖೇರಿಯಲ್ಲಿ ನಡೆದಿದ್ದ ಹಿಂಸಾಚಾರದಲ್ಲಿ  ಮೃತಪಟ್ಟ ರೈತರ ಕುಟುಂಬವನ್ನು ಭೇಟಿಯಾಗಲು ಹೊರಟಿದ್ದಾರೆ. ಆಮ್ ಆದ್ಮಿ ಪಾರ್ಟಿ ಇಂದು ಸಂಜೆ ಈ ಪ್ರದೇಶವನ್ನು ತಲುಪಿತ್ತು.

ರಾಹುಲ್ ಗಾಂಧಿ ಹಾಗೂ  ಪ್ರಿಯಾಂಕಾ ಗಾಂಧಿ ವಾದ್ರಾ ಅವರಲ್ಲದೆ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಪಂಜಾಬ್ ಮುಖ್ಯಮಂತ್ರಿ ಚರಣ್ ಜೀತ್ ಚನ್ನಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ ಹಾಗೂ  ದೀಪೇಂದರ್ ಹೂಡಾ ತಂಡದ ಭಾಗವಾಗಿದ್ದಾರೆ.

ರಾಹುಲ್ ಹಾಗೂ  ಪ್ರಿಯಾಂಕಾ ಗಾಂಧಿ ಒಂದು ವಾಹನದಲ್ಲಿ ಪ್ರಯಾಣಿಸುತ್ತಿದ್ದರೆ, ಕಾಂಗ್ರೆಸ್ ನಾಯಕರಾದ ರಣದೀಪ್ ಸುರ್ಜೇವಾಲಾ ಹಾಗೂ  ದೀಪಿಂದರ್ ಹೂಡಾ ಇನ್ನೊಂದು ವಾಹನದಲ್ಲಿ ಪ್ರಯಾಣಿಸುತ್ತಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಹಾಗೂ  ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಇನ್ನೊಂದು ವಾಹನದಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News