×
Ad

ಮುಕ್ತ ವಿವಿ ಸ್ನಾತಕ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ

Update: 2021-10-06 21:17 IST

ಉಡುಪಿ, ಅ.6: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ 2020-21ನೇ ಸಾಲಿನಲ್ಲಿ ಪ್ರವೇಶ ಪಡೆದ ಪ್ರಥಮ ವರ್ಷದ ಸ್ನಾತಕ ಹಾಗೂ ಸ್ನಾತಕೋತ್ತರ ಮತ್ತು 2019-20ನೇ ಸಾಲಿನ ದ್ವಿತೀಯ ವರ್ಷದ ಸ್ನಾತಕ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮದ ತರಗತಿಗಳನ್ನು ಆನ್‌ಲೈನ್ ಮೂಲಕ ಅ.8ರಿಂದ ನಡೆಸಲಿದೆ.

ಈ ಕೌಶಲ್ಯಾಭಿವೃದ್ಧಿ ತರಬೇತಿಯ ಪಠ್ಯವಿಷಯ, ವೇಳಾಪಟ್ಟಿ ಹಾಗೂ ತರಗತಿಗಳ ಆನ್‌ಲೈನ್ ವೆಬ್‌ಲಿಂಕ್‌ಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿವಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಪಡೆದುಕೊಂಡ ವಿದ್ಯಾರ್ಥಿಗಳಿಗೆ ಇ-ಡಿಜಿಟಲ್ ಪ್ರಮಾಣಪತ್ರವನ್ನು ನೀಡಲಾ ಗುವುದು.

ವಿದ್ಯಾರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ಸಂಯೋಜ ನಾಧಿಕಾರಿ ಲೋಕೇಶ ಜಿ.ಎಸ್. (ಮೊ:9611434810) ಇವರನ್ನು ಸಂಪರ್ಕಿಸುವಂತೆ ವಿವಿಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News