ರಾಷ್ಟ್ರಪತಿಗೆ ರಾಮಾಯಣ ದರ್ಶನಂ ಮತ್ತು ಪರ್ವ ಕಾದಂಬರಿ ಕೊಡುಗೆ ನೀಡಿದ ಸಚಿವ ಸುನೀಲ್ ಕುಮಾರ್

Update: 2021-10-06 18:31 GMT

ಬೆಂಗಳೂರು, ಅ.6: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಬುಧವಾರ ರಾಜಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು.

ಈ ಸಂದರ್ಭದಲ್ಲಿ ಸುನೀಲ್ ಕುಮಾರ್ ಅವರು ಕುವೆಂಪು ಅವರ ‘ಶ್ರೀ ರಾಮಾಯಣ ದರ್ಶನಂ’ ಕೃತಿಯ ಇಂಗ್ಲಿಷ್ ಅನುವಾದಿತ ಪುಸ್ತಕ ಹಾಗೂ ಡಾ.ಎಸ್.ಎಲ್.ಭೈರಪ್ಪ ಅವರ ‘ಪರ್ವ’ ಕಾದಂಬರಿಯ ಇಂಗ್ಲಿಷ್ ಅನುವಾದಿತ ಕೃತಿಯನ್ನು ರಾಷ್ಟ್ರಪತಿಗೆ ಕೊಡುಗೆಯಾಗಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News