×
Ad

ಬೆಳಗಾವಿ: ಮನೆ ಕುಸಿದು 7 ಮಂದಿ ಮೃತ್ಯು

Update: 2021-10-06 22:53 IST

ಬೆಳಗಾವಿ: ಮನೆ ಕುಸಿದು ಒಂದೇ ಮನೆಯ 7ಮಂದಿ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ಜಿಲ್ಲೆಯ ಬಡಾಲ ಅಂಕಲಗಿ ಗ್ರಾಮದಲ್ಲಿ ಸಂಭವಿಸಿದೆ.

ಇಂದು ಸಂಜೆ ಸುರಿದ ಭಾರೀ ಮಳೆಗೆ ಭೀಮಪ್ಪ ಖನಗಾಂವಿ ಎಂಬುವವರಿಗೆ ಸೇರಿದ ಮನೆಯ ಛಾವಣಿ ಕುಸಿದಿದ್ದು, ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 

ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರ ಭೇಟಿ ನೀಡಿ ಸ್ಥಳೀಯರ ಜತೆಗೂಡಿ ಮೃತದೇಹ ಹೊರತೆಗೆಯುವ ಕಾರ್ಯಾಚರಣೆಯಲ್ಲಿ ಕೈಗೊಂಡಿದ್ದಾರೆ.

ಅರ್ಜುನ ಹನುಮಂತ ಖನಗಾಂವಿ (48), ಪತ್ನಿ ಸತ್ಯವ್ವ ಖನಗಾಂವಿ (45), ಪುತ್ರಿ ಲಕ್ಷ್ಮಿ ಖನಗಾಂವಿ (17), ಪೂಜಾ ಅರ್ಜುನ ಖನಗಾಂವಿ (8), ಗಂಗವ್ವ ಭೀಮಪ್ಪ ಖನಗಾಂವಿ (50), ಸವಿತಾ ಭೀಮಪ್ಪ ಖನಗಾಂವಿ (28) ಮತ್ತು ಕಾಶವ್ವ ವಿಠ್ಠಲ ಕೊಳಪ್ಪನವರ (8) ಮೃತರು ಎಂದು ಗುರುತಿಸಲಾಗಿದೆ. 

5 ಲಕ್ಷ ರೂ. ಪರಿಹಾರ ಘೋಷಣೆ: ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. 

''ಮೃತಪಟ್ಟ ವ್ಯಕ್ತಿಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ
ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಕೂಡಲೇ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ'' ಎಂದು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News