ಜೆಡಿಎಸ್ ಗೆ ಕಾಂಗ್ರೆಸ್ ಮಾತ್ರ ಟಾರ್ಗೆಟ್: ಸಿದ್ದರಾಮಯ್ಯ ಆರೋಪ

Update: 2021-10-07 05:47 GMT

ಹುಬ್ಬಳ್ಳಿ: ಜೆಡಿಎಸ್ ಪಕ್ಷ ಕಾಂಗ್ರೆಸ್ ಅನ್ನು ಮಾತ್ರ ಟಾರ್ಗೆಟ್ ಮಾಡುತ್ತಿದೆ ಎಂದು ಮಾಜಿ ಮುಖ್ಯಂಮತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. 

ಗುರುವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಸಿದ್ದರಾಮಯ್ಯ, ಜೆಡಿಎಸ್ ಹಾನಗಲ್, ಸಿಂದಗಿ ಕ್ಷೇತ್ರಗಳಿಗೆ ನಡೆಯಲಿರುವ ವಿಧಾನಸಭೆ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ಅನ್ನು ಟಾರ್ಗೆಟ್ ಮಾಡುತ್ತಿದ್ದು, ಬಿಜೆಪಿ ಪರ ಒಲವು ತೋರಿಸುತ್ತಿದೆ ಎಂದು ದೂರಿದ್ದಾರೆ. 

ಅಲ್ಪಸಂಖ್ಯಾತರಿಗೆ ಅವಕಾಶ ಮಾಡಿಕೊಟ್ಟಿರುವುದಕ್ಕೆ ನಮ್ಮ ಅಭ್ಯಂತರವೇನಿಲ್ಲ ಎಂದ ಸಿದ್ದರಾಮಯ್ಯ, ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಗೆ ನೆಲೆ ಇದೆ. ಆದ್ದರಿಂದ ಆ ಭಾಗದ ಮಂಡ್ಯ, ಹಾಸನ ಮತ್ತಿತರ ಕಡೆಗಳಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಟಿಕೆಟ್ ಕೊಡಲಿ  ಎಂದು ತಿಳಿಸಿದರು. 

ಹಾನಗಲ್ ಹಾಗೂ ಸಿಂದಗಿಯಲ್ಲಿ ಬಿಜೆಪಿಗೆ ಅನುಕೂಲ ಆಗಲಿ ಎಂದು ಅಲ್ಪಸಂಖ್ಯಾತರನ್ನು ಕಣಕ್ಕಿಳಿಸಿದೆ ಎಂದು ದೂರಿದ್ದಾರೆ.

ಇನ್ನು ಆರೆಸ್ಸೆಸ್ ಅಣತಿಯಂತೆ ಬಿಜೆಪಿ ಆಡಳಿತ ನಡೆಸುತ್ತಿದೆ. ಆಡಳಿತದಲ್ಲಿ ಕೋಮು ಸಂಘಟನೆಗಳ ಹಸ್ತಕ್ಷೇಪ ದೇಶಕ್ಕೆ ಒಳ್ಳೆಯದಲ್ಲ ಎಂದು ಹೇಳಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News