ಬೆಂಗಳೂರಿನಲ್ಲಿ ಮತ್ತೊಂದು ದುರಂತ; ಐದು ಅಂತಸ್ತಿನ ಕಟ್ಟಡ ಕುಸಿತ
Update: 2021-10-07 17:48 IST
ಬೆಂಗಳೂರು: ನಗರದಲ್ಲಿ ಮತ್ತೊಂದು ಬಹುಮಹಡಿ ಕಟ್ಟಡವೊಂದು ಕುಸಿದಿರುವ ಘಟನೆ ಕಸ್ತೂರಿನಗರದಲ್ಲಿ ಸಂಭವಿಸಿದೆ.
ಇತ್ತೀಚೆಗೆ ನಗರದ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡವೊಂದು ಕುಸಿದಿರುವ ಪ್ರಕರಣದ ಬೆನ್ನಲ್ಲೇ ಇದೀಗ ಕಸ್ತೂರಿನಗರದಲ್ಲಿ ಗುರುವಾರ ಏಕಾಏಕಿ ಐದು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ.
ಘಟನೆಯಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡಗಳ ಅವಶೇಷ ತೆಗೆಯುವ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.