ಕರಾವಳಿ ಅಡುಗೆ ಕಾರ್ಮಿಕರು, ಸಹಾಯಕ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ
ಕುಂದಾಪುರ, ಅ.7: ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕ ಪರಿಷತ್ ಬೆಂಗಳೂರು, ಕರ್ನಾಟಕ ಅಡುಗೆ ಕೆಲಸಗಾರರ ಹಾಗೂ ಸಹಾಯಕ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಇವರ ಸಹಯೋಗದೊಂದಿಗೆ ಕರಾವಳಿ ಅಡುಗೆ ಕಾರ್ಮಿಕರ ಹಾಗೂ ಸಹಾಯಕ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ನೂತನ ಘಟಕದ ಉದ್ಘಾಟನಾ ಸಮಾರಂಭವು ಬಿದ್ಕಲ್ ಕಟ್ಟೆಯ ನಾಗಲಕ್ಷ್ಮೀ ಸಭಾಭವನದಲ್ಲಿ ಬುಧವಾರ ಜರಗಿತು.
ಘಟಕವನ್ನು ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕ ಸಂಘದ ಗೌರವಾಧ್ಯಕ್ಷ ಕೆ.ವಿ ಸುರೇಶ್ ಕುಮಾರ್ ಉದ್ಘಾಟಿಸಿದರು. ಬೆಂಗಳೂರಿನ ಅಸಂಘಟಿತ ಅಡುಗೆ ಕಾರ್ಮಿಕ ಹಾಗೂ ಸಹಾಯಕ ಕಾರ್ಮಿಕರ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಚ್.ವಿ.ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಸಂಘಟಿತ ಪುರೋಹಿತ ಕಾರ್ಮಿಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪ್ರಕಾಶ್ ಹೊಳ್ಳ, ಅಸಂಘಟಿತ ಪುರೋಹಿತರ ಕ್ಷೇಮಾಭಿವೃದ್ಧಿ ಸಂಘದ ಸಂಘಟಕ ನರಸಿಂಹ ಭಟ್ ಸಾಲಿಗ್ರಾಮ ಮಾತನಾಡಿದರು. ಅಧ್ಯಕ್ಷತೆಯನ್ನು ರಾಘವೇಂದ್ರ ಅಡಿಗ ವಹಿಸಿ ದ್ದರು. ಸಂಘದ ಐಡಿ ಕಾರ್ಡ್ ಹಾಗೂ ಇ-ಶ್ರಮ್ ಕಾರ್ಡ್‌ಗಳನ್ನು ವಿತರಿಸ ಲಾಯಿತು.
ಉಪಾಧ್ಯಕ್ಷ ಮಂಜುನಾಥ ಮಯ್ಯ ಕಮಲಶಿಲೆ, ಗಣೇಶ್ ಉಪಾದ್ಯ ಬಳ್ಕೂರು, ಅನ್ನಪೂರ್ಣ ಕಾರಂತ ಕೋಣಿ, ಜತೆ ಕಾರ್ಯದರ್ಶಿ ಚಿತ್ರಾ ಕುಂಭಾಶಿ, ಸುರೇಂದ್ರ ನಾವಡ, ಖಜಾಂಚಿ ವಿಶ್ವನಾಥ ಭಟ್ ಸಾಲಿಗ್ರಾಮ, ಕಾರ್ಯಕಾರಿ ಸಮಿತಿ ಸದಸ್ಯರಾದ ಚಂದ್ರ ಶೇಖರ ಉಡುಪ ಹರಾವರಿ, ನಾಗೇಂದ್ರ ಬಿಳಿಯ ಕೋಟೇಶ್ವರ, ರೇಣುಕಾ ಹತ್ವಾರ್ ಬೀಜಾಡಿ ಉಪಸ್ಥಿತರಿದ್ದರು.
ಸಂಘದ ಗೌರವ ಅಧ್ಯಕ್ಷ ಅರವಿಂದ ಐತಾಳ್ ಕೋಟೇಶ್ವರ ಸ್ವಾಗತಿಸಿದರು. ಅಕ್ಷತಾ ಗಿರೀಶ್ ಐತಾಳ್ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಶಿವಾನಂದ ಅಡಿಗ ಮಣೂರು ವಂದಿಸಿದರು.