​ಉಡುಪಿ: ಗುರುವಾರ ಮತ್ತೆ 17 ಮಂದಿಯಲ್ಲಿ ಕೊರೋನ ಸೋಂಕು ಪತ್ತೆ

Update: 2021-10-07 13:14 GMT

ಉಡುಪಿ, ಅ.7: ಜಿಲ್ಲೆಯಲ್ಲಿ ಗುರುವಾರ ಮತ್ತೆ 17ಮಂದಿ ಕೋವಿಡ್-19ರ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ಇದರೊಂದಿಗೆ ದಿನದಲ್ಲಿ 27 ಮಂದಿ ಸೋಂಕಿನಿಂದ ಗುಣಮುಕ್ತರಾದರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 67ಕ್ಕೆ ಇಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸತತ 10ನೇ ದಿನವೂ ಸೋಂಕಿಗೆ ಯಾರೂ ಬಲಿಯಾಗಿಲ್ಲ. ದಿನದಲ್ಲಿ ಸೋಂಕು ದೃಢಪಟ್ಟ 17 ಮಂದಿಯಲ್ಲಿ 12 ಮಂದಿ ಪುರುಷರು ಹಾಗೂ ಐವರು ಮಹಿಳೆಯರು. ಇವರಲ್ಲಿ 9ಮಂದಿ ಉಡುಪಿ ತಾಲೂಕಿನವರು. ನಾಲ್ವರು ಕುಂದಾಪುರ ಮತ್ತು ಇಬ್ಬರು ಕಾರ್ಕಳ ತಾಲೂಕಿನವರು. ಉಳಿದಿಬ್ಬರು ಹೊರ ಜಿಲ್ಲೆಯವರು. ಇವರಲ್ಲಿ ಏಳು ಮಂದಿಗೆ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ 10 ಮಂದಿಗೆ ಮನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು 27 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 75,898ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3952 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,437ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 11,55,765 ಮಂದಿಯನ್ನು ಕೋವಿಡ್ ಪರೀಕ್ಷೆಗೊಳ ಪಡಿಸಲಾಗಿದೆ.

1142 ಮಂದಿಗೆ ಲಸಿಕೆ: ಇಂದು ಜಿಲ್ಲೆಯಲ್ಲಿ ಒಟ್ಟು 1142 ಮಂದಿ ಲಸಿಕೆಯನ್ನು ಸ್ವೀಕರಿಸಿದ್ದು, ಇವರಲ್ಲಿ 239 ಮಂದಿ ಮೊದಲ ಡೋಸ್ ಹಾಗೂ 903 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 135 ಮಂದಿ ಮೊದಲ ಡೋಸ್ ಹಾಗೂ 610 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 104 ಮಂದಿ ಮೊದಲ ಡೋಸ್ ಹಾಗೂ 293 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 9,01,015 ಮಂದಿ ಮೊದಲ ಡೋಸ್ ಲಸಿಕೆಯನ್ನು ಹಾಗೂ 4,19,031 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದ್ದಾರೆ.­

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News