×
Ad

​ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2021-10-07 21:43 IST

ಕಾಪು, ಅ.7: ಕೌಟುಂಬಿಕ ಕಾರಣದಿಂದ ಮನನೊಂದ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಅಶೋಕ ಕುಂಬಾರ(30) ಎಂಬವರು ಅ.6ರಂದು ಸಂಜೆ ಮಲ್ಲಾರಿನ ಕೊಂಬಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಕಣ್ಣು ಕಾಣಿಸದೆ ಕಿವಿ ಕೇಳಿಸದ ಹಿನ್ನೆಲೆಯಲ್ಲಿ ಮನನೊಂದ ಅಪ್ಪಿ(75) ಎಂಬವರು ಅ.6ರಂದು ಮನೆ ಬಳಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News