×
Ad

ಪ್ರಥಮ ಬಾರಿಗೆ ಮಂಗಳೂರಿನಲ್ಲಿ ರಾಷ್ಟ್ರಪತಿ ವಾಸ್ತವ್ಯ

Update: 2021-10-07 22:11 IST

ಮಂಗಳೂರು, ಅ.7: ರಾಷ್ಟ್ರಪತಿ ರಾಮನಾಥ ಕೋವಿಂದ್‌ರ ಮೂರು ದಿನಗಳ ಕರ್ನಾಟಕ ರಾಜ್ಯ ಪ್ರವಾಸದ ಸಂದರ್ಭದಲ್ಲಿ ಮಂಗಳೂರಿನಲ್ಲಿ ಗುರುವಾರ ಸಂಜೆ ಆಗಮಿಸಿ ವಾಸ್ತವ್ಯ ಹೂಡುವ ಮೂಲಕ ಪ್ರಥಮ ಬಾರಿಗೆ ರಾಷ್ಟ್ರಪತಿಗಳು ಮಂಗಳೂರಿನಲ್ಲಿ ವಾಸ್ತವ್ಯ ಹೂಡಿದಂತಾಗಿದೆ.

ಈ ಹಿಂದೆ ರಾಷ್ಟ್ರಪತಿಗಳು ಮಂಗಳೂರಿಗೆ ಭೇಟಿ ನೀಡಿದ್ದರೂ ವಾಸ್ತವ್ಯ ಹೂಡಿರುವುದು ಇದೇ ಪ್ರಥಮ.

ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ರಾಷ್ಟ್ರಪತಿಯಾಗಿದ್ದ ವೇಳೆ ಮಂಗಳೂರಿಗೆ ಭೇಟಿ ನೀಡಿದ್ದರು. ಆದರೆ ಅವರು ಮಂಗಳೂರಿನಲ್ಲಿ ವಾಸ್ತವ್ಯ ಹೂಡಿರಲಿಲ್ಲ. 

ರಾಷ್ಟ್ರಪತಿ ರಾಮನಾಥ ಕೋವಿಂದ್ ಬುಧವಾರ ಬೆಂಗಳೂರಿಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಗುರುವಾರ ಸಂಜೆ ನಿಗದಿಯಾಗಿದ್ದ ಸಮಯಕ್ಕಿಂತ ಸುಮಾರು 1 ಗಂಟೆ ತಡವಾಗಿ ಮಂಗಳೂರಿನ ಸರ್ಕ್ಯೂಟ್ ಹೌಸ್‌ಗೆ ಆಗಮಿಸಿದ್ದಾರೆ. ಅವರ ಜೊತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇದ್ದರು.

ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ ಸರಕಾರಿ ಶಿಷ್ಟಾಚಾರದ ಪ್ರಕಾರ ರಾಷ್ಟ್ರಪತಿಯನ್ನು ನಗರಕ್ಕೆ ಸ್ವಾಗತಿಸಿದರು. ಜಿಲ್ಲಾಡಳಿತದ ವತಿಯಿಂದ ಗೌರವ ರಕ್ಷೆಯೊಂದಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಹಾಗೂ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News