ನಾಪತ್ತೆಯಾಗಿದ್ದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಪತ್ತೆ

Update: 2021-10-07 17:01 GMT
ಗಿರಿರಾಜ್

ಶಿವಮೊಗ್ಗ, ಅ.7:  ವಾಟ್ಸ್ ಆ್ಯಪ್  ಮೆಸೇಜ್ ಮಾಡಿ ನಾಪತ್ತೆಯಾಗಿದ್ದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಗಿರಿರಾಜ್ ಪತ್ತೆಯಾಗಿದ್ದಾರೆ. ಅವರು ಪತ್ತೆಯಾಗಿರುವ ಕುರಿತು ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗಿರಿರಾಜ್ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ. ಅಸ್ವಸ್ಥ ಸ್ಥಿತಿಯಲ್ಲಿ ಗಿರಿರಾಜ್ ಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. 

ಸೆ.28ರಂದು ಗಿರಿರಾಜ್ ನಾಪತ್ತೆಯಾಗಿದ್ದರು. ಕಚೇರಿಯ ಕಾರ್ಯದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅವರು ತಮ್ಮ ಕಚೇರಿ ಸಿಬ್ಬಂದಿಗೆ ಕಳುಹಿಸಿದ್ದ ವಾಟ್ಸ್ ಆ್ಯಪ್ ಮೆಸೇಜ್ ತೀವ್ರ ಸಂಚಲನ ಸೃಷ್ಟಿಸಿತ್ತು. ಪತ್ತೆಯಾಗಿರುವ ಕುರಿತು ಹೆಚ್ಚಿನ ಮಾಹಿತಿ ತಿಳಿಯಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News