ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
Update: 2021-10-08 20:45 IST
ಉಡುಪಿ, ಅ.8: ಜಿಲ್ಲೆಯ ಹೆಬ್ರಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2022ನೇ ಸಾಲಿಗೆ 6 ಮತ್ತು 9ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಕರೆಯಲಾಗಿದೆ. 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ನವೆಂಬರ್ 30 ಹಾಗೂ 9ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಸಲ್ಲಿಲು ಅ.31 ಕೊನೆಯ ದಿನವಾಗಿದೆ.
ಜವಾಹರ ನವೋದಯ ವಿದ್ಯಾಲಯದಲ್ಲಿ ಉಚಿತವಾಗಿ ಮಕ್ಕಳಿಗೆ ಆಧುನಿಕ ಶಿಕ್ಷಣದ ಜೊತೆಗೆ ಕಂಪ್ಯೂಟರ್ ಶಿಕ್ಷಣ, ಯೋಗ, ವಾಚನಾಲಯದ ಸೌಲಭ್ಯ ಸಂಗೀತ, ನೃತ್ಯ, ಕರಾಟೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅವಕಾಶವಿದ್ದು, ವಿಶಾಲವಾದ ಪ್ರಯೋಗ ಶಾಲೆಗಳನ್ನು ಸುಂದರವಾದ ಕಟ್ಟಡವನ್ನು ಹೊಂದಿದೆ.
ಪ್ರಸುತ್ತ ಉಡುಪಿ ಜಿಲ್ಲೆಯಲ್ಲಿ 5 ಹಾಗೂ 8ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳು ಅರ್ಜಿ ಸಲ್ಲಿಸಲು ವೆಬ್‌ಸೈಟ್-www.navodaya.gov.in - ಅಥವಾ ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 9880588736/08253-251260 ನ್ನು ಸಂಪರ್ಕಿಸುವಂತೆ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.