ಅ.25ರವರೆಗೆ ಕೋವಿಡ್ ಮಾರ್ಗಸೂಚಿ ವಿಸ್ತರಿಸಿ ರಾಜ್ಯ ಸರಕಾರ ಆದೇಶ

Update: 2021-10-08 16:38 GMT

ಬೆಂಗಳೂರು, ಅ.8: ಕೋವಿಡ್-19 ನಿಯಮಾವಳಿಗಳ ಬಗ್ಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದ್ದು, ಈಗಾಗಲೇ ಹೊರಡಿಸಿದ್ದ ಕೋವಿಡ್ ಮಾರ್ಗಸೂಚಿಗಳನ್ನು ರಾಜ್ಯ ಸರಕಾರ  2021ರ ಅ.25ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹೊರಡಿಸಲಾದ ಚಾಲ್ತಿಯಲ್ಲಿರುವ ಸುತ್ತೋಲೆ/ಮಾರ್ಗಸೂಚಿಗಳನುಸಾರ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಜಿಲ್ಲೆಗಳ ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚಿನ ಕಣ್ಗಾವಲು ಇರಿಸುವುದನ್ನು ಮುಂದುವರೆಸಲು ಆದೇಶದಲ್ಲಿ ತಿಳಿಸಲಾಗಿದೆ. 

ಈ ಮಾರ್ಗಸೂಚಿಗಳನ್ನು ಬಿಬಿಎಂಪಿ ಮುಖ್ಯ ಆಯುಕ್ತರು, ಪೊಲೀಸ್ ಆಯುಕ್ತರು, ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಇತರ ಇಲಾಖಾ ಮುಖ್ಯಸ್ಥರು ಮತ್ತು ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕೆಂದು ಕಂದಾಯ ಇಲಾಖೆ ಸರಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News