ರಾಜ್ಯದ ಹಲವೆಡೆ ಅ.10ರವರೆಗೆ ಭಾರಿ ಮಳೆ ಸಾಧ್ಯತೆ
Update: 2021-10-08 22:06 IST
ಬೆಂಗಳೂರು, ಅ.8: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಅ.10ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗಿನಲ್ಲಿ ವ್ಯಾಪಕ ಮಳೆಯಾಗಲಿದ್ದು, ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಅಲ್ಲದೇ, ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಸಹ ಹೆಚ್ಚಿನ ಮಳೆ ನಿರೀಕ್ಷೆ ಇದೆ. ಹಲವೆಡೆ ಚದುರಿದಂತೆ ಧಾರಾಕಾರ, ಹಗುರ ಮಳೆಯಾಗುತ್ತಿದೆ.