ಅ.10ರಂದು ಪುಲ್ಕೇರಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಔಷಧ ವಿತರಣೆ

Update: 2021-10-08 16:39 GMT

ಕಾರ್ಕಳ, ಅ.8: ಉಡುಪಿ ಜಿಲ್ಲಾ ತೋಟಗಾರಿಕಾ ಬೆಳೆಗಾರರ ಸಂಘ ಇದರ ವತಿಯಿಂದ ಸ್ವಾತಂತ್ರದ ಅಮೃತ ಮಹೋತ್ಸವದ ಪ್ರಯುಕ್ತ ಉಚಿತ ಔಷಧ ವಿತರಣೆ ಕಾರ್ಯಕ್ರಮ ಪ್ರಧಾನ ಮಂತ್ರಿ ಭಾರತೀಯ ಜನೌಷಧ ಕೇಂದ್ರ ಪುಲ್ಕೇರಿ ಇಲ್ಲಿ ಅ.10ರಂದು ನಡೆಯಲಿದೆ ಎಂದು ಉಡುಪಿ ಜಿಲ್ಲಾ ತೋಟಗಾರಿಕಾ ಬೆಳೆಗಾರರ ಸಂಘ ಅಧ್ಯಕ್ಷ ಅಶೋಕ ಕುಮಾರ ಕೊಡ್ಗಿ ಹಾಗೂ ನಿರ್ದೇಶಕ ಪ್ರದೀಪ್ ಹೆಬ್ಬಾರ್ ಹೇಳಿದರು.

ಕಾರ್ಕಳದಲ್ಲಿ ಅ.8ರಂದು ಪತ್ರಿಕಾ ಗೋಷ್ಠಿ ನಡೆಸಿದ ಅವರು ಗ್ರಾಮೀಣ ಜನರಿಗೆ ಕಡಿಮೆ ದರದಲ್ಲಿ ಔಷಧ ವಿತರಿಸುವ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯನ್ನು ಗ್ರಾಮೀಣ ಭಾಗದ ಜನರಿಗೆ ತಲುಪಿಸುವ ಉದ್ದೇಶದಿಂದ ಜನೌಷಧ ಕೇಂದ್ರಗಳು ಕಾರ್ಯಾಚರಿಸುತ್ತಿವೆ. ಅಮೃತಮಹೋತ್ಸವದ ಸಂದರ್ಭದಲ್ಲಿ 75 ವಯಸ್ಸಿನ ಹಿರಿಯ ನಾಗರಿಕರ ಆರೋಗ್ಯ ತಪಾಸಣೆ ನಡೆಸಿ ಅವರಿಗೆ ಔಷಧ ಕಿಟ್‌ಗಳನ್ನು ಕಾರ್ಯಕ್ರಮದಲ್ಲಿ ವಿತರಿಸಲಾಗುತ್ತಿದೆ. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‌ ಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ಪುರಸಭೆ ಅಧ್ಯಕ್ಷೆ ಸುಮಾಕೇಶವ್, ಪುರಸಭೆ ಸದಸ್ಯೆ ಮೀನಾಕ್ಷಿ ಗಂಗಾಧರ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಜಿ.ಪಂ ಸಿಇಒ ಡಾ ನವೀನ್ ಭಟ್, ಡಿಎಚ್‌ಒ ಡಾ ನಾಗಭೂಷಣ ಉಡುಪ, ಪಿಎಂಬಿಜೆಪಿ ವ್ಯವಸ್ಥಾಪಕ ಡಾ ಅನಿಲಾ ದೀಪಕ್, ತಾ ಆರೋಗ್ಯಾಧಿಕಾರಿ ಡಾ ಕೃಷ್ಣಾನಂದ ಶೆಟ್ಟಿ, ಕೃಷಿ ಇಲಾಖೆ ನಿರ್ದೇಶಕ ಕೆಂಪೆಗೌಡ, ತಾ ಆಸ್ಪತ್ರೆ ಆಡಳಿತಾಧಿಕಾರಿ ಡಾ ಕೆ.ಎಸ್ ರಾವ್, ಬಜಗೋಳಿ ಪಿಎಚ್‌ಸಿ ಡಾ. ಗಿರೀಶ್, ಬೈಲೂರು ಪಿಎಚ್‌ಸಿ ಡಾ ಮಹಾಂತೇಶ್ ಮುಖ್ಯ ಅತಿಥಿಯಾಗಿರುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಎಚ್ ವಿಟ್ಟಲ ಶೆಟ್ಟಿ, ಅಮರನಾಥ ಚಾತ, ಸಿಇಒ ವಿರೇಂದ್ರ ಐತಾಳ್, ಅಶೋಕ್ ಮತ್ತಿತರರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News