×
Ad

​ಅ.12: ವಿವೇಕಾನಂದ ಸಂಶೋಧನಾ ಕೇಂದ್ರ ಉದ್ಘಾಟನೆ

Update: 2021-10-09 17:31 IST

ಪುತ್ತೂರು: ವಿವೇಕಾನಂದ ಐಕ್ಯುಎಸಿ ಘಟಕದ ಸಹಯೋಗದಲ್ಲಿ ವಿವೇಕಾನಂದ ಕಾಲೇಜ್‍ನಲ್ಲಿ ಆರಂಭಗೊಳ್ಳಲಿರುವ ಸಂಶೋಧನಾ ಕೇಂದ್ರ ಆ.12ರಂದು ಕಾಲೇಜ್‍ನ ಸ್ನಾತಕ್ಕೋತ್ತರ ಅಧ್ಯಯನ ಕೇಂದ್ರದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಕಾಲೇಜಿನ ಪ್ರಿನ್ಸಿಪಾಲ್ ವಿ. ಜಿ. ಭಟ್ ತಿಳಿಸಿದ್ದಾರೆ.

ಅವರು ಶನಿವಾರ ಪುತ್ತೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಂಗಳೂರು ವಿಶ್ವವಿದ್ಯಾನಿಯದ ಕುಲಪತಿಗಳಾದ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕೆ. ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿವಿಯ ಡಾ.ಪಿ. ದಯಾನಂದ ಪೈ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ. ಶ್ರೀಪತಿ ಕಲ್ಲೂರಾಯ `ಸಮತ್ವ' ಸಂಶೋಧನ ಪತ್ರಿಕೆಯ ಸಂಚಿಕೆಯನ್ನು ಅನಾವರಣಗೊಳಿಸಿ, ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ  ಶ್ರೀನಿವಾಸ್ ಪೈ ಹಾಗೂ ಸಂಚಾಲಕರಾದ  ಮುರಳಿಕೃಷ್ಣ ಕೆ.ಎನ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ವಿವೇಕಾನಂದ ಸಂಶೋಧನಾ ಕೇಂದ್ರದ ನಿರ್ದೇಶಕರಾದ ಡಾ.ಶ್ರೀಧರ ಎಚ್.ಜಿ., ಐಕ್ಯುಎಸಿ ಸಂಯೋಜಕರಾದ ಶಿವಪ್ರಸಾದ್ ಕೆ.ಎಸ್. ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News