ಫಲಾಹ್ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ

Update: 2021-10-09 12:07 GMT

ಬಿಸಿ ರೋಡ್ : ತಲಪಾಡಿ ವಿದ್ಯಾನಗರದ ಫಲಾಹ್ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ 2020-21 ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಅಬ್ದುಲ್ ಖಾದರ್ ಹುಸೈನ್ ಪಡುಬಿದ್ರಿ ಪ್ರಾಸ್ತವಿಕವಾಗಿ ಮಾತನಾಡಿದರು. ಫಲಾಹ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಹಾಜಿ ಯು.ಬಿ. ಮಹಮ್ಮದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು, ಕೋಶಾಧಿಕಾರಿ ಹಾಜಿ ಅಬ್ಬಾಸ್ ಮಜಲ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಇತ್ತೀಚೆಗೆ ಸರಕಾರಿ ಸೇವೆಗೆ ನಿಯುಕ್ತರಾದ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಮನೋಜ್ ಎಂ.ಬಿ ಯವರನ್ನು ಸನ್ಮಾನಿಸಲಾಯಿತು. ಇತ್ತೀಚೆಗೆ ಉನ್ನತ ಶಿಕ್ಷಣ ಮುಗಿಸಿದ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ ಸ್ಯಾಂಡ್ರ ಡಿ ಸೋಜರವರನ್ನು ಗೌರವಿಸಲಾಯಿತು. ಇದೇ ಸಂದರ್ಭ 2021-2022 ನೇ ಶೈಕ್ಷಣಿಕ ಸಾಲಿನ ಕಾಲೇಜು ನಾಯಕಿ ತಂಶೀರ ಉಪನಾಯಕಿ ಸೈಬುನ್ನಿಸಾ ಹಾಗೂ ವಿವಿಧ ಚಟುವಟಿಕೆಗಳ ನಾಯಕರ ಪ್ರಮಾಣ ವಚನ ಬೋಧನೆ ನಡೆಯಿತು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಮುಝೀಬರ ಪದಗ್ರಹಣ ನಡೆಯಿತು.

ತಂಶೀರ ಕಾರ್ಯಕ್ರಮ ನಿರೂಪಿಸಿದರು. ಆಶಿಕ ಮತ್ತು ಮುರ್ಷಿದ ಕಾರ್ಯಕ್ರಮದಲ್ಲಿ ಸ್ವಾಗತಿಸಿ, ವಂದಿಸಿದರು. ಕನ್ನಡ ಉಪನ್ಯಾಸಕಿ ರೇವತಿ ಎನ್ ರೈ ಕಾರ್ಯಕ್ರಮ ಉಸ್ತುವಾರಿ ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News