×
Ad

ಜಮ್ಮು-ಕಾಶ್ಮೀರದಲ್ಲಿ ನಾಗರಿಕರನ್ನು ರಕ್ಷಿಸಲು ಕೇಂದ್ರ ಸರಕಾರ ವಿಫಲ:ಕಾಂಗ್ರೆಸ್ ನಾಯಕಿ ರಜನಿ ಪಾಟೀಲ್

Update: 2021-10-09 19:41 IST
photo: Twitter@rajanipatil_in

 ಶ್ರೀನಗರ: ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದಾಗಿ ಮೃತಪಟ್ಟವರ ಕುಟುಂಬವನ್ನು ಶನಿವಾರ ಭೇಟಿಯಾಗಿರುವ ಕಾಂಗ್ರೆಸ್ ನಾಯಕಿ ರಜನಿ ಪಾಟೀಲ್ ಕೇಂದ್ರಾಡಳಿತ ಪ್ರದೇಶದ ಜನರನ್ನು ರಕ್ಷಿಸಲು ವಿಫಲವಾಗಿರುವ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಭಯೋತ್ಪಾದಕರು ಕೆಲವರನ್ನು ಗುರಿಯಾಗಿಸಿಕೊಂಡು ಮಾಡುತ್ತಿರುವ ಹತ್ಯೆಗಳು ಕೇಂದ್ರ ಸರಕಾರದ ದೊಡ್ಡ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಕೇಂದ್ರವು ಜಮ್ಮು-ಕಾಶ್ಮೀರದ ಜನತೆಯನ್ನು ರಕ್ಷಿಸಲು ವಿಫಲವಾಗಿದ್ದು, ಕಾಶ್ಮೀರದ ಭದ್ರತಾ ಪರಿಸ್ಥಿತಿ ಹದಗೆಟ್ಟಿದೆ. ಕಾಶ್ಮೀರದಲ್ಲಿರುವ ಅಲ್ಪಸಂಖ್ಯಾತ ಸಮುದಾಯ ಹಾಗೂ ಇತರ ಸದಸ್ಯರುಗಳ ಸುರಕ್ಷತೆ ಹಾಗೂ ಭದ್ರತೆಗಾಗಿ ಪರಿಣಾಮಕಾರಿ ಕ್ರಮಗಳನ್ನು ಕೇಂದ್ರ ಸರಕಾರ ತೆಗೆದುಕೊಳ್ಳಬೇಕೆಂದು ರಾಜ್ಯಸಭಾ ಸದಸ್ಯೆ ಪಾಟೀಲ್ ಒತ್ತಾಯಿಸಿದ್ದಾರೆ.

ಪಾಟೀಲ್ ಅವರಿಗೆ ಜೆಕೆಪಿಸಿಸಿ ಮುಖ್ಯಸ್ಥ ಜಿಎ ಮೀರ್ ಹಾಗೂ ಪಕ್ಷದ ನಾಯಕ ತಾರಿಖ್ ಹಾಮೀದ್ ಸಾಥ್ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News